VIVEKANANDA COLLEGE, PUTTUR

Re - accredited at 'A' Grade by the NAAC with 3.30 CGPA

Recognised as the College with Potential for Excellence (CPE) By the UGC

| +91 8251 230 455 | Kannada

ಎಂ.ಕಾಂ.ನಲ್ಲಿ ವಿವೇಕಾನಂದಕ್ಕೆ ಶೇ.100 ಫಲಿತಾಂಶ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯವು ಕಳೆದ ಮೇ ತಿಂಗಳಿನಲ್ಲಿ ನಡೆಸಿದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ಎಂ.ಕಾಂ. ವಿಭಾಗವು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಈ ಬ್ಯಾಚ್‌ನ ವಿದ್ಯಾರ್ಥಿಗಳು ಕಳೆದ ನಾಲ್ಕೂ ಸೆಮೆಸ್ಟರ್‌ಗಳಲ್ಲಿ ನೂರು ಶೇಕಡಾ ಫಲಿತಾಂಶವನ್ನು ದಾಖಲಿಸಿರುವುದು ಗಮನಾರ್ಹ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.