News & Updates

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ

ಪುತ್ತೂರು: ಇಂದು ಪತ್ರಿಕೋದ್ಯಮ ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು ಕಲಿಯಬೇಕಾದ ವಿಷಯಗಳು ಹಲವಾರು ಇವೆ. ಮಾಧ್ಯಮ ಕ್ಷೇತ್ರದಲ್ಲಿ ಯಾವ ರೀತಿಯಾಗಿ ನಾವು ಮುಂದುವರೆಯಬೇಕು ಎಂದು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ದಿಷ್ಟವಾದ ಗುರಿ ಹೊಂದಿರಬೇಕು. ಇಲ್ಲಿ ಸತ್ಯಾಸತ್ಯತೆಗಳನ್ನು ಸರಿಯಾಗಿ ಪರಿಶೀಲಿಸಿ ಕಾರ್ಯನಿರ್ವಹಿಸುವುದು ಬಹುಮುಖ್ಯ. ಓರ್ವ ಸಮರ್ಥ ಪತ್ರಕರ್ತನಾಗಬೇಕಾದರೆ ಆತ ಒಳ್ಳೆಯ ಮಾತುಗಾರಿಕೆಯ ಕೌಶಲ್ಯವನ್ನು ಹೊಂದಿರಬೇಕು ಇಂದು ಟಿವಿ9 ವರದಿಗಾರ ಅಶೋಕ್ ಕುಮಾರ್ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಪತ್ರಿಕೋದ್ಯಮ ವಿಭಾಗ ವತಿಯಿಂದ ಆಯೋಜಿಸಿದ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪತ್ರಿಕೋದ್ಯಮದಲ್ಲಿ ವರದಿಗಾರಿಕೆ ಎನ್ನುವುದು ಒಂದು ಸವಾಲಿನ ಕೆಲಸ. ಅದನ್ನು ಪತ್ರಕರ್ತರು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಬೇಕು ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಳ್ಳುವವರು ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಶ್ರೀ ಪಿ.ಕೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ ಆರ್ ನಿಡ್ಪಳ್ಳಿ ನಿರ್ವಹಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ಪುತ್ತೂರು, ಫೆ. ೦೨ : ನಮ್ಮನ್ನು ಯೋಚಿಸುವಂತೆ…

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್;

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ…

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದಅಗತ್ಯವಿದೆ. ಎಲ್ಲಾ…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಪುತ್ತೂರು: ನಾಯಕತ್ವ ಎನ್ನುವುದು ನಮ್ಮೊಳಗಿನಒಳ್ಳೆಯತನವನ್ನು ಹೊರಗೆ ತರುವ…