News & Updates

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ

Oplus_131072

ಹವ್ಯಾಸಿ ಪತ್ರಕರ್ತರಾಗಿಯೂ ಬದುಕು ಕಟ್ಟಿಕೊಳ್ಳಬಹುದು- ಗುರುಪ್ರಸಾದ್ ಟಿ.ಎನ್
ಪುತ್ತೂರು,ಎ.17: ಫ್ರಿಲಾನ್ಸ್ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಬೇರೆ ಬೇರೆ ಕೆಲಸಗಳನ್ನು ಮಾಡಿ ಆದಾಯವನ್ನು ಗಳಿಸಬಹುದು. ಪ್ರಸ್ತುತ ಕಾಲಘಟ್ಟದಲ್ಲಿ ನಿರ್ದಿಷ್ಟ ಆದಾಯಕ್ಕೆ ಅವಲಂಬಿತರಾಗಿರುವುದು ಕಷ್ಟ. ಆದರೆ ಇಲ್ಲಿ ಕೆಲವೊಂದು ಸಂದರ್ಭದಲ್ಲಿ ನಮ್ಮ ಕೆಲಸಕ್ಕೆ ನಿರೀಕ್ಷೆಗೂ ಮೀರಿ ಆದಾಯಗಳನ್ನು ಮಾಡಬಹುದು. ಈ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಆಯ್ಕೆಗಳಿವೆ ಎಂದು ಮಂಗಳೂರಿನ ಹವ್ಯಾಸಿ ಪತ್ರÀಕರ್ತ ಗುರುಪ್ರಸಾದ್ ಟಿ.ಎನ್ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಾವು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿದ ಕೆಲಸಗಳು ಎಂದಿಗೂ ವ್ಯರ್ಥವಲ್ಲ. ವರದಿಗಾರಿಕೆ, ನುಡಿಚಿತ್ರ ಬರವಣೆಗೆ, ಕಾರ್ಟೂನ್ ಬಿಡಿಸುವುದು ಹೀಗೆ ಅನೇಕ ಮಜಲುಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಯಶಸ್ವಿ ಹವ್ಯಾಸಿ ಪತ್ರಕರ್ತರಾಗಲು ಸಾಧ್ಯ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಹವ್ಯಾಸಿ ಪತ್ರಿಕೊದ್ಯಮದಲ್ಲಿ ತೊಡಗಿಸಿಕೊಂಡರೆ ಮುಂದೆ ಉದ್ಯೋಗದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಉಪಯೋಗವಾಗುತ್ತದೆ. ಅಲ್ಲದೇ ಹವ್ಯಾಸಿ ಪತ್ರಿಕೋದ್ಯಮದಿಂದ ಸಣ್ಣ ಪುಟ್ಟ ಆದಾಯವನ್ನು ಪಡೆದು ವಿದ್ಯಾಭ್ಯಾಸವನ್ನು ಅಡೆತಡೆಯಿಲ್ಲದೆ ಮುಂದುವರೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಶ್ರೀ ಪಿ.ಕೆ ಉಪಸ್ಥಿತರಿದ್ದರು. ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಚೈತ್ರಾ ಭಟ್ ಸ್ವಾಗತಿಸಿ, ದೀಪ್ತಿ ಅಡ್ಡಂತಡ್ಕ ನಿರ್ವಹಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ಖೋಖೋ ಚಾಂಪಿಯನ್ಶಿಪ್ ಅಲ್ಟಿಮೇಟ್ ಟ್ರೋಪಿ -2024

ವಿವೇಕಾನಂದ ಕಾಲೇಜಿನಲ್ಲಿ ಖೋಖೋ ಚಾಂಪಿಯನ್ಶಿಪ್ ಅಲ್ಟಿಮೇಟ್…

ಪುತ್ತೂರು,ಮೇ.27: ಕ್ರೀಡೆ ಎನ್ನುವುದು ನಮ್ಮ ಸದೃಢಆರೋಗ್ಯಕ್ಕೆ ಬಹಳ…

ವಿವೇಕಾನಂದ ಕಾಲೇಜಿನಲ್ಲಿ ಕಲಾ ಸಾಮ್ರಾಟ್-2024 ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ಕಲಾ ಸಾಮ್ರಾಟ್-2024 ಕಾರ್ಯಕ್ರಮ

ಪುತ್ತೂರು,ಮೇ.24ವಿದ್ಯಾರ್ಥಿಗಳಲ್ಲಿ ಕೌಶಲ್ಯದ ಜೊತೆ ಒಂದಿಷ್ಟು ಸಂಸ್ಕಾರ ಇರಬೇಕು…

ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಫೆಸ್ಟ್ ಏಕತ್ರ -2024

ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಫೆಸ್ಟ್ ಏಕತ್ರ…

ಪುತ್ತೂರು, ಮೇ.22:ಒಂದು ಉದ್ಯಮವನ್ನು ಯಶಸ್ವಿಯಾಗಿ ನಡೆಸಲು ಹಲವಾರು…