
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಕಾಲೇಜು ಇಲ್ಲಿನ
ಹಿರಿಯ ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿಯ ಸಹಯೋಗದಲ್ಲಿ
ನಡೆದ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ಪದವಿ
ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿ
ಸಂಘದ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ,
ಟಿಎಎಫ್ಇ ಬೆಂಗಳೂರು ಇದರ ಆಡಳಿತ ವಿಭಾಗದ ಮ್ಯಾನೇಜರ್
ಆಗಿರುವ ಸದಾಶಿವ ಎನ್ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಇವರು &quoಣ;ವಿವೇಕಾನಂದ ಕಾಲೇಜು
ನಮಗೆಲ್ಲ ಸಂಸ್ಕಾರವುಳ್ಳ ಶಿಕ್ಷಣವನ್ನು ನೀಡಿದೆ. ಆದುದರಿಂದ
ನಮಗಿAದು ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಲು ಈ
ವಿದ್ಯಾಸಂಸ್ಥೆ ನೆರವಾಗಿದೆ&quoಣ; ಎಂದು ತಮ್ಮ ವಿದ್ಯಾರ್ಥಿ ಜೀವನದ
ಕ್ಷಣಗಳನ್ನು ಹಂಚಿಕೊAಡರು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ
ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ, ಕಾಲೇಜಿನ ಹಿರಿಯ ವಿದ್ಯಾರ್ಥಿ
ಹಾಗೂ ಸುಳ್ಯ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್
ಮೂಡಿತ್ತಾಯ, ವಿವೇಕಾನಂದ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ
ಅಧ್ಯಕ್ಷ ಸತೀಶ್ ರಾವ್.ಪಿ, ಕೋಶಾಧಿಕಾರಿ ವಾಮನ ಪೈ, ಕಾಲೇಜಿನ
ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ,
ಸಂಚಾಲಕ ಮುರಳಿ ಕೃಷ್ಣ ಕೆ.ಎನ್, ವಿಶ್ರಾಂತ ಪ್ರಾಧ್ಯಾಪಕ ಡಾ.ಪಿ.ಕೆ
ಬಾಲಕೃಷ್ಣ, ಸಾಹಿತಿ ಗೋಪಾಲಕೃಷ್ಣ ಕುಂಟಿನಿ, ವಿಶ್ರಾಂತ ಕಛೇರಿ
ಅಧೀಕ್ಷಕಿ ಸಾವಿತ್ರಿ ಎನ್.ಎಚ್, ವಿಶ್ರಾಂತ ಪ್ರಥಮ ದರ್ಜೆ ಸಹಾಯಕ
ಅನಂತ ಪದ್ಮನಾಭ ಪ್ರಭು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಉಪಪ್ರಾಂಶುಪಾಲ ಪ್ರೊ.
ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿ ಐಕ್ಯೂಎಸಿ ಸಂಯೋಜಕಿ ಹಾಗೂ ವಾಣಿಜ್ಯ
ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ವಂದಿಸಿದರು. ಕನ್ನಡ ವಿಭಾಗದ
ಮುಖ್ಯಸ್ಥ ಡಾ. ಮನಮೋಹನ ಎಂ ಹಾಗೂ ಸ್ನಾತಕೋತ್ತರ
ವಿಭಾಗದ ವಿದ್ಯಾರ್ಥಿನಿ ಅನನ್ಯ ಅಡಿಗ ನಿರ್ವಹಿಸಿದರು
