News & Updates

ವಿವೇಕಾನಂದ ವಿದ್ಯಾವರ್ಧಕ ಸಂಘದಿoದ ಬಾಂಗ್ಲಾವಿರುದ್ಧ ಮಾನವ ಸರಪಳಿ ಮೂಲಕ ಜನಜಾಗೃತಿ ಜಾಥಾ-15-8-2024

ಪುತ್ತೂರು: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ
ಹಿಂಸಾಚಾರವನ್ನು ವಿರೋಧಿಸಿ ಹಾಗೂ ಸಮಾಜದಲ್ಲಿ ರಾಷ್ಟ್ರೀಯ
ಜಾಗೃತಿಯನ್ನು ಮೂಡಿಸಲು ಪುತ್ತೂರಿನ ವಿವೇಕಾನಂದ
ವಿದ್ಯಾವರ್ಧಕ ಸಂಘ(ರಿ) ಇದರ ವತಿಯಿಂದ ನಡೆಸಲ್ಪಡುವ
ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಒಟ್ಟುಗೂಡಿ ಮಾನವ ಸರಪಳಿ
ಜಾಥಾ ಇಂದು ತೆಂಕಿಲದ ಶಾಲಾ ಆವರಣದಲ್ಲಿ ನಡೆಯಿತು.
ಮಾನವ ಸರಪಳಿ ಜಾಥಾಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ
ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮಕ್ಕೆ
ವಿವೇಕಾನಂದ ಕಾಲೇಜಿನ ಕ್ಯಾಂಪಸ್ಸಿನ ಮುಖ್ಯ ದ್ವಾರದ ಬಳಿ
ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿವೇಕಾನಂದ
ವಿದ್ಯಾವರ್ಧಕ ಸಂಘದ ಕರ‍್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್
ಉಪಸ್ಥಿತರಿದ್ದರು.
ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜಿನ ಆವರಣದಿಂದ
ವಿದ್ಯಾರ್ಥಿಗಳು ಮಾನವ ಸರಪಳಿಯ ಮೂಲಕ ಹೊರಟು
ವಿವೇಕನಗರದ ತೆಂಕಿಲದಲ್ಲಿ ಇರುವ ವಿವೇಕಾನಂದ ಶಾಲಾ
ಆವರಣದಲ್ಲಿ ಒಟ್ಟಾಗಿ ಸಮಾಜದಲ್ಲಿ ಜನ ಜಾಗೃತಿಯನ್ನು ಮೂಡಿಸುವ
ಕರ‍್ಯವನ್ನು ಮಾಡಿದರು. ಜಾಥಾದುದ್ದಕ್ಕೂ ವಿದ್ಯಾರ್ಥಿಗಳು ಬಾಂಗ್ಲಾ
ವಿರುದ್ಧ ಘೋಷಣೆಯನ್ನು ಕೂಗುತ್ತಾ ರಾಷ್ಟಿçÃಯ
ಜಾಗೃತಿಯನ್ನು ಮೂಡಿಸುವ ಭಿತ್ತಿಪತ್ರಗಳನ್ನು ಹಿಡಿದು
ಸಾಗಿದರು.
ಹಾಗೂ ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿವೇಕಾನಂದ
ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿವಿಧ
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು,
ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ
ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ಪುತ್ತೂರು, ಫೆ. ೦೨ : ನಮ್ಮನ್ನು ಯೋಚಿಸುವಂತೆ…

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್;

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ…

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದಅಗತ್ಯವಿದೆ. ಎಲ್ಲಾ…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಪುತ್ತೂರು: ನಾಯಕತ್ವ ಎನ್ನುವುದು ನಮ್ಮೊಳಗಿನಒಳ್ಳೆಯತನವನ್ನು ಹೊರಗೆ ತರುವ…