News & Updates

ವಂದೇ ಮಾತರಂ ಗೀತೆ ನಮ್ಮ ಅಸ್ಮಿತೆಯ ಗುರುತು :ರಾಜೇಶ ಪದ್ಮಾರ್ವಿವೇಕಾನಂದ ಕಾಲೇಜಿನಲ್ಲಿ ವಂದೇ ಮಾತರಂ 150 ನೇ ವರ್ಷದ ಆಚರಣೆ;

ಪುತ್ತೂರು, ಅ. 15: ವಂದೇ ಮಾತರಂ ಗೀತೆಯೂ ಏಕತೆಯನ್ನು ಸಾರುವುದರ
ಜೊತೆಗೆ ಜನರಲ್ಲಿ ಪ್ರೇರಣೆಯನ್ನು ಮೂಡಿಸುತ್ತದೆ. ಇದರ ನಿರ್ಮಾತೃ ಬಂಕಿಮ
ಚoದ್ರ ಚಟರ್ಜಿ. ಯಾವುದೇ ಜಾತಿ, ಬೇಧವಿಲ್ಲದೆ ರೂಪಿಸಿದ ಈ ವಂದೇ ಮಾತರಂ
ಗೀತೆಯು ಬ್ರಿಟಿಷರ ಆಳ್ವಿಕೆಯನ್ನು ಅಂತ್ಯಗೊಳಿಸುವ ಉದ್ದೇಶದಿಂದ ಬಂಗಾಳ
ವಿಭಜನೆಯ ವಿರೋಧವಾಗಿ ವಂಗ ಭಂಗ ಚಳವಳಿಯ ಧ್ಯೇಯ ಗೀತೆಯಾಗಿ
ಮೂಡಿಬಂದ ಗೀತೆಯಿದು. ಕೊಲ್ಕತ್ತಾದಿಂದ ಹೊರಟ ಹೋರಾಟದ ಗೀತೆ ವಿಶ್ವಾದ್ಯಂತ
ವ್ಯಾಪಿಸಿತು ಮತ್ತು ಯುಗಾಂತರ ಸಂಘಟನೆಯ ಆರಂಭಕ್ಕೆ ಮುಂದಡಿಯಿಟ್ಟಿತು.
ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಈ ಜಯಘೋಷವನ್ನು ಕೂಗಿದರು ಎಂದು
ರಾಷ್ಟಿçÃಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ
ಪದ್ಮಾರ್ ಹೇಳಿದರು.

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)
ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ
ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ
ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ.
ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ, ಸಮಾಜದ ಪ್ರತಿಯೊಂದು ಸ್ಥರಗಳಲ್ಲೂ
ವಂದೇ ಮಾತರಂ ಕುರಿತು ಜಾಗೃತಿ ಮೂಡಬೇಕು. ವಂದೇ ಮಾತರಂ ಕುರಿತ ಈ
ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂದಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯನ್ನು
ರಾಷ್ಟಿçÃಯತೆಯೆಡೆಗೆ ಎಚ್ಚರಿಸುವ ಕಾರ್ಯ ಇದು ಎಂದರು.
ಸಮಾರoಭದ ಬಳಿಕ ವಿದ್ಯಾರ್ಥಿಗಳು ಒಕ್ಕೊರಲಿನಿಂದ ವಂದೇ ಮಾತರಂ
ಗೀತೆಯನ್ನು ಹಾಡಿದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಡಾ. ವಿಜಯ
ಸರಸ್ವತಿ ಬಿ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ವಿಶೇಷ ಅಧಿಕಾರಿ ಹಾಗೂ
ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ವಂದಿಸಿ, ಪ್ರಥಮ
ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಜೆ.ರೈ
ನಿರೂಪಿಸಿದರು.

Related News

ವಂದೇ ಮಾತರಂ ಗೀತೆ ನಮ್ಮ ಅಸ್ಮಿತೆಯ ಗುರುತು :ರಾಜೇಶ ಪದ್ಮಾರ್ವಿವೇಕಾನಂದ ಕಾಲೇಜಿನಲ್ಲಿ ವಂದೇ ಮಾತರಂ 150 ನೇ ವರ್ಷದ ಆಚರಣೆ;

ವಂದೇ ಮಾತರಂ ಗೀತೆ ನಮ್ಮ ಅಸ್ಮಿತೆಯ…

ಪುತ್ತೂರು, ಅ. 15: ವಂದೇ ಮಾತರಂ ಗೀತೆಯೂ…

ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ;

ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ…

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ…

ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ;

ವಿವೇಕಾನಂದ ಕಾಲೇಜಿನ ಎನ್ ಸಿ ಸಿ…

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ…