News & Updates

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಜುಲೈ15; ಶಿಕ್ಷಣ ಸಂಸ್ಥೆಗೆ ಸಂಪನ್ಮೂಲ ಎಂದರೆ ಅದು ಶಿಕ್ಷಕರು.ಹಾಗಾಗಿ ಶಿಕ್ಷಕರ ಅಭಿವೃದ್ಧಿ ಆಗಬೇಕು. ಸಮಾಜಕ್ಕೆ ನಾವು ಏನನ್ನಾದರೂ ಕೊಟ್ಟಲ್ಲಿ ಸಮಾಜ ನಮ್ಮನ್ನು ಗುರುತಿಸುತ್ತದೆ ಹಾಗೂ ಸಮಾಜದ ನಿರೀಕ್ಷೆಗೆ ಶಿಕ್ಷಕರು ಸ್ಪಂದಿಸುವುದು ಕೂಡಾ ಅಷ್ಟೇ ಮುಖ್ಯವಾಗಿದೆ.ಹಾಗಾಗಿ ಶಿಕ್ಷಕರು ಎಂದೆಂದಿಗೂ ಅತ್ಯುತ್ಕೃಷ್ಟ ಮಟ್ಟದಲ್ಲಿ ಬೆಳೆಯಬೇಕು. ಶಿಕ್ಷಕರು ಪ್ರತಿದಿನ ಹೊಸ ಹೊಸ ವಿಚಾರಗಳನ್ನು ಪ್ರತಿದಿನ ತಿಳಿದುಕೊಳ್ಳಬೇಕು.ಶಿಕ್ಷಕರು ತಮ್ಮ ತಿಳುವಳಿಕೆ ಹಾಗೂ ಜ್ಞಾನಕೋಶಗಳನ್ನು ತೆರೆಯುವುದು ಮಾತ್ರವಲ್ಲದೇ ವಿದ್ಯಾರ್ಥಿಗಳ ಅಲೋಚನೆಗಳನ್ನು ತಿಳಿದುಕೊಳ್ಳುವ ಕೆಲಸವನ್ನು ಮಾಡಬೇಕು..ಶಿಕ್ಷಕರು ತಮ್ಮ ವೃತ್ತಿಯ ಸಂದರ್ಭದಲ್ಲಿ ಇರುವ
ನ್ಯೂನತೆಗಳನ್ನು ತಿದ್ದಿಕೊಳ್ಳುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.
ಇವರು ವಿವೇಕಾನಂದ ಕಲಾ,ವಿಜ್ಞಾನ ಹಾಗೂ ಹಾಗೂ ವಾಣಿಜ್ಯ(ಸ್ವಾಯತ್ತ)ಕಾಲೇಜು ಪುತ್ತೂರು ಇಲ್ಲಿ ಉಪನ್ಯಾಸಕರಿಗೆ ಏರ್ಪಡಿಸಲಾದ ಅಧ್ಯಾಪಕರ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಡಾ.ಶ್ರೀಶ ಭಟ್ ಅವರಿಂದ ಮಾಹಿತಿ ಕಾರ್ಯಗಾರ ನಡೆಯಿತು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕ ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೃಷ್ಣ ಕಾರಂತ ಸ್ವಾಗತಿಸಿದರು.ಎಲೆಕ್ಟ್ರಾನಿಕ್ ವಿಭಾಗದ ಮುಖ್ಯಸ್ಥೆ ಸುಪ್ರಭಾ ಕಾರ್ಯಕ್ರಮವನ್ನು ನಿರೂಪಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಅಭಿಯಾನ;

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’…

ಪುತ್ತೂರು, ನ. 24; ನಶೆ ಮತ್ತು ಮದ್ಯವ್ಯಸನ…

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ. ರಾಜೇಶ್ವರಿ ಎಂ:ಇoಟರ್ನೆಟ್ ಆಫ್ ಥಿಂಗ್ಸ್ (ಐಓಟಿ) ಹ್ಯಾಂಡ್ಸ್-ಆನ್ ಕಾರ್ಯಾಗಾರ ಉದ್ಘಾಟನೆ;

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ.…

ಪುತ್ತೂರು ನ.24: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಆಫ್…

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ…

ಪುತ್ತೂರು. ನ. 22: ಮನುಷ್ಯ ಯಾವಾಗ ನೈತಿಕ…