News & Updates

ವಿವೇಕಾನಂದ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ;

ಪುತ್ತೂರು, ಜನವರಿ 26:

ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ), ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಹಾಗೂ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಇದರ ಸಹಯೋಗದಲ್ಲಿ ವಿವೇಕಾನಂದ ಕಾಲೇಜಿನ ಆವರಣದಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡಿದ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಭಾರತಕ್ಕೆ ಸ್ವಾತಂತ್ರ್ಯ ದೊರಕುವಾಗ ಬ್ರಿಟೀಷರಿಂದ ಮುಕ್ತಿ ಪಡೆಯುವುದಷ್ಟೇ ಗುರಿ ಆಗಿರಲಿಲ್ಲ. ಗುಲಾಮಿತನದ ಮಾನಸಿಕತೆಯಿಂದಲೂ ಹೊರಬರಬೇಕೆಂಬ ಉದ್ದೇಶವೂ ಇತ್ತು. ಮುಂದಿನ ಶತಮಾನಕ್ಕೂ ಮಾರ್ಗದರ್ಶನವಾಗಬಲ್ಲ ಸಂವಿಧಾನವನ್ನು ಒಪ್ಪಿಕೊಂಡ ದಿನ ಗಣರಾಜ್ಯ ದಿವಸ. ಭಾರತದ ನಿಲುವುಗಳನ್ನು ಜಗತ್ತು ಗೌರವಿಸುತ್ತದೆ ಎಂದರೆ ಅದಕ್ಕೆ ಸಂವಿಧಾನ ಕಾರಣವಾಗಿದೆ. ಭಾರತ ಅನೇಕ ಸವಾಲುಗಳನ್ನು ಎದುರಿಸುತ್ತಿರುವ ದೇಶ. ಅದಾಗಿಯೂ ಉತ್ಸಾಹದಿಂದ ಪುಟಿದೇಳುತ್ತಿರುವ ರಾಷ್ಟ್ರ ನಮ್ಮದು. ಇಷ್ಟು ವರ್ಷಗಳ ಇತಿಹಾಸವನ್ನು ಅವಲೋಕಿಸಬೇಕಿರುವ ನಾವು ಭವಿಷ್ಯದ ಬಗೆಗೂ ಯೋಚಿಸಬೇಕು. ವಿದ್ಯಾರ್ಥಿಗಳ ಹಾಗೂ ಯುವಕರ ಕೈಯಲ್ಲಿ ಭಾರತದ ಭವಿಷ್ಯವಿದೆ. ಅದನ್ನು ಸಾಕಾರಗೊಳಿಸಲು ಸಂಕಲ್ಪಿಸಿ ನಾವು ಮುಂದುವರಿಯಬೇಕು ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿಯ ಪದಾಧಿಕಾರಿಗಳು, ಉಪನ್ಯಾಸಕರು, ಉಪನ್ಯಾಸಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಸ್ವಾಗತಿಸಿ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ವಂದಿಸಿದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ನಿರ್ವಹಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ;

ವಿವೇಕಾನಂದ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ;

ಪುತ್ತೂರು, ಜನವರಿ 26: ಪುತ್ತೂರಿನ ವಿವೇಕಾನಂದ ಕಲಾ,…

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ಮಾಹಿತಿ ಕಾರ್ಯಗಾರ;

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ಮಾಹಿತಿ ಕಾರ್ಯಗಾರ;

ಪುತ್ತೂರು,ಜನವರಿ.22: ಸಂಶೋಧನೆಯು ಹುಡುಕಾಟಕ್ಕಿಂತಭಿನ್ನವಾಗಿದೆ. ಹೇಗೆ ವಿಭಿನ್ನ ಎಂದು…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…