
ಪುತ್ತೂರು: ಕಲಿಯುವ ಇಚ್ಛೆ ಮತ್ತು ಅಭ್ಯಾಸದ ಮನೋಭಾವದಿಂದ
ಅಭಿವೃದ್ಧಿ ಸಾಧ್ಯವಾಗುತ್ತದೆ. ಇಂದಿನ ಕಾರ್ಪೊರೇಟ್ ಜಗತ್ತಿನಲ್ಲಿ ಪದವಿ
ಮತ್ತು ಅಂಕಗಳಿಗಿoತ ಆಲೋಚನಾ ಶಕ್ತಿ, ಸಂವಹನ ಕೌಶಲ್ಯ ಹಾಗೂ
ಸೃಜನಶೀಲತೆಗೆ ಹೆಚ್ಚಿನ ಮಹತ್ವವಿದೆ. ವಿದ್ಯಾರ್ಥಿಗಳು ಅಂಕಗಳಿಗೆ
ಸೀಮಿತವಾಗದೆ ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಮತ್ತು
ಪ್ರಶ್ನೆಗಳು ಮೂಡಿದಾಗ ಬಗೆಹರಿಸಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.
ಕೌಶಲ್ಯಾಭಿವೃದ್ಧಿಯು ವಿದ್ಯಾರ್ಥಿಗಳ ವೃತ್ತಿಜೀವನದ ಜೊತೆಗೆ ದೇಶದ
ಅಭಿವೃದ್ಧಿಗೂ ಸಹಕಾರಿಯಾಗಿದೆ ಎಂದು ವಿವೇಕಾನಂದ ಮಹಾವಿದ್ಯಾಲಯ
(ಸ್ವಾಯತ್ತ) ಇದರ ಅರ್ಥಶಾಸ್ತç ವಿಭಾಗ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್
ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ
(ಸ್ವಾಯತ್ತ) ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಐಕ್ಯೂಎಸಿ
ಘಟಕದ ಜಂಟಿ ಆಶ್ರಯದಲ್ಲಿ ನಡೆದ ‘ಪ್ರಕರ್ಷನ್’ ಮೂರು ದಿನಗಳ
ಸಾಮರ್ಥ್ಯ ವರ್ಧನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ
ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಎಸ್ ಮಾತನಾಡಿ, ಬಿ.ಬಿ.ಎ. ವಿದ್ಯಾರ್ಥಿಗಳ
ಕೌಶಲ್ಯಾಭಿವೃದ್ಧಿಗಾಗಿ ಮೂರು ದಿನಗಳ ಸಾಮರ್ಥ್ಯ ವರ್ಧನಾ
ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರ ಮುಖೇನ ಒತ್ತಡ
ನಿರ್ವಹಣೆ, ಸಂವಹನ, ಸಮಯ ನಿರ್ವಹಣೆ ಮತ್ತು ತಂಡ ನಿರ್ಮಾಣದ ಕುರಿತು
ತರಬೇತಿ ನೀಡಲಾಗುತ್ತದೆ. ಇಂದಿನ ಉದ್ಯೋಗ ಕ್ಷೇತ್ರದಲ್ಲಿ ಪದವಿಗಿಂತ
ಕೌಶಲ್ಯಗಳಿಗೆ ಹೆಚ್ಚಿನ ಮಹತ್ವವಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ
ಸಕ್ರಿಯವಾಗಿ ಭಾಗವಹಿಸಿ ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು
ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಆಕಾಂಕ್ಷಾ ಚಾರಿಟಬಲ್ ಟ್ರಸ್ಟಾö್ನ
ಕೌನ್ಸಿಲಿಂಗ್ ಸೈಕಾಲಜಿಸ್ಟ್ ಸಮಾಲೋಚನಾ ರಾಜೇಶ್ವರಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ರೇಖಾ. ಪಿ
ಸ್ವಾಗತಿಸಿ, ತೃತೀಯ ಬಿಬಿಎ ವಿಧ್ಯಾರ್ಥಿನಿ ಧನಲಕ್ಷಿö್ಮÃ ವಂದಿಸಿ, ನಿರೂಪಿಸಿದರು.
