
ಪುತ್ತೂರು, ಸೆ.2: ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ
ಅವಕಾಶಗಳು ಬಹು ಹೇರಳವಾಗಿದೆ. ಅವೆಲ್ಲವನ್ನು ವಿದ್ಯಾರ್ಥಿಗಳು
ಸದುಪಯೋಗ ಪಡಿಸಿಕೊಳ್ಳಬೇಕು. ಪಾಠ ಹಾಗೂ ಪಠ್ಯೇತರ
ವಿಷಯಗಳಲ್ಲಿ ವಿದ್ಯಾರ್ಥಿಗಳು ಸದಾ ಸಕ್ರೀಯರಾಗಬೇಕು. ವಿದ್ಯಾರ್ಥಿಗಳು
ತಮ್ಮ ಆಸಕ್ತಿಗೆ ಅನುಗುಣವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಆ
ನಿಟ್ಟಿನಲ್ಲಿ ಸಾಗಲು ಪೂರ್ವತಯಾರಿಯ ಅಗತ್ಯ ಸಿದ್ಧತೆಗಳನ್ನು
ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಶೈಕ್ಷಣಿಕದ ಜೊತೆಗೆ
ಸಂಶೋಧನಾತ್ಮಕ ಲೇಖನಗಳನ್ನು ಪ್ರಕಟಿಸಿ
ಗುರುತಿಸಿಕೊಳ್ಳಬೇಕು ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ
ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ
(ಸ್ವಾಯತ್ತ) ಪುತ್ತೂರು ಸ್ನಾತಕೋತ್ತರ ಅಧ್ಯಯನ ಮತ್ತು
ಸಂಶೋಧನಾ ಕೇಂದ್ರದ ವತಿಯಿಂದ ನಡೆದ 2025-26ನೇ ಸಾಲಿನ ಪ್ರಥಮ
ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ
ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಕಾಲೇಜಿನ ಆಡಳಿತ ಮಂಡಳಿಯ
ಸAಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ವಿದ್ಯಾರ್ಥಿಗಳು ತಮ್ಮ
ಶೈಕ್ಷಣಿಕ ಏಳಿಗೆಗೆ ಪೂರಕವಾಗಿ ಕಾಲೇಜಿನ ಸೌಲಭ್ಯಗಳನ್ನು
ಸಮರ್ಪಕವಾಗಿ ಬಳಸಿಕೊಳ್ಳಬೇಕು. ಶಿಕ್ಷಣವನ್ನು ಆಯ್ಕೆ ಮಾಡುವ
ಸಂದರ್ಭದಲ್ಲಿ ಆಧುನಿಕ ವಿಷಯಗಳನ್ನು ಆಯ್ಕೆ ಮಾಡುವುದಕ್ಕಿಂತಲೂ
ಸಾAಪ್ರದಾಯಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡರೆ ಭವಿಷ್ಯ
ಉಜ್ವಲವಾಗುತ್ತದೆ. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ
ಪದವಿಯನ್ನು ಪಡೆಯಬೇಕೆಂಬ ಆಸಕ್ತಿ ಕಡಿಮೆಯಾಗುತ್ತಿದೆ. ಉನ್ನತ
ಮಟ್ಟದ ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಪಡೆದುಕೊಂಡರೆ ಉತ್ತಮ
ಉದ್ಯೋಗವು ದೊರಕುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ನಾÊಕ್. ಬಿ, ವಿದ್ಯಾರ್ಥಿಗಳಿಗೆ ಶುಭ
ಹಾರೈಸಿದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಹಾಗೂ
ಸಂಶೋಧನಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ. ವಿಜಯಸರಸ್ವತಿ. ಬಿ
ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮೀ ವಿ. ಭಟ್ ವಂದಿಸಿ,
ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಹರ್ಷಿತಾ ಕೆ. ಆರ್ ನಿರೂಪಿಸಿದರು.