

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ
ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ
ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್
ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು,
ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ 1ರಂದು ನಡೆಯುವ
ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ
ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ
ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ
ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,
ಪ್ರಾoಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ
ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು
ಕೋರುತ್ತಾರೆ.
