News & Updates

ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ;

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ
ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ
ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ
ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು
ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ
ಮಾಲಕ ಧ್ರುವ ಪ್ರಭು ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ,
ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್
ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದರು.


ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ
ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ
ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು
ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ
ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್
ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.

ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು: ವ್ಯವಹಾರ ಅಧ್ಯಯನ
ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು
ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್
ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ
ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ
ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ
ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.

Related News

ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ;

ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ…

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ…

ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ;

ವಿವೇಕಾನಂದ ಕಾಲೇಜಿನ ಎನ್ ಸಿ ಸಿ…

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ…

ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿವಿವೇಕಾನಂದ ಕಾಲೇಜಿನ ಉತ್ತಮ ಸಾಧನೆ.

ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿವಿವೇಕಾನಂದ ಕಾಲೇಜಿನ…

ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30…