News & Updates

ಸಂಸ್ಕೃತದ ಅಧ್ಯಯನದಿಂದ ಮನಕ್ಕೆ ಆನಂದ— ಡಾ. ವೆಂಕಟೇಶ ಮಂಜುಳಗಿರಿ;

ಪುತ್ತೂರು, ಸೆಪ್ಟೆಂಬರ್ 11:

ವಿವೇಕದ ಜೊತೆಗೆ ಆನಂದ ಪಡುವ ಗುಣವೂ ನಮ್ಮಲ್ಲಿದ್ದರೆ ಪ್ರಗತಿಯನ್ನು ಸಾಧಿಸಬಹುದು. ಸುಸಂಸ್ಕೃತನಾದ ಗುರುವಿನ ಶಿಷ್ಯನೂ ಸಂಸ್ಕಾರವಂತನಾಗಿ ರೂಪುಗೊಳ್ಳುತ್ತಾನೆ. ಸಂಸ್ಕೃತ ಭಾಷೆಯಲ್ಲಿ ಸುಸಂಸ್ಕೃತ ವಿಚಾರಗಳೇ ತುಂಬಿಕೊಂಡಿವೆ. ಇದರ ಅಧ್ಯಯನದಿಂದ ಜೀವನದಲ್ಲಿ ಸ್ವಾವಲಂಬಿಗಳಾಗಲು ಸಹಕಾರಿ. ಇಂದಿನ ಕಾಲದಲ್ಲಿ ನಿಜವಾದ ಇತಿಹಾಸ ಏನು ಎಂದು ತಿಳಿಯಲು ವೇದಗಳ ಅಧ್ಯಯನವನ್ನು ನಡೆಸಬೇಕು. ಸಂಸ್ಕೃತದ ಅಧ್ಯಯನದಿಂದ ಮನಕ್ಕೆ ಆನಂದ ಲಭಿಸುತ್ತದೆ. ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಯವರು ಒಳ್ಳೆಯ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ವಿಶ್ರಾಂತ ಪ್ರಾಚಾರ್ಯ ಡಾ. ವೆಂಕಟೇಶ ಮಂಜುಳಗಿರಿ ನುಡಿದರು.

ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸಂಸ್ಕೃತ ವಿಭಾಗ, ಸಂಸ್ಕೃತ ಸಂಘ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ‘ಸುರಭಾರತೀ ವೈಭವಂ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಮಾತನಾಡಿ ಸಂಸ್ಕೃತ ಒಂದು ಜಾತಿ, ವರ್ಗಕ್ಕೆ ಸೀಮಿತವಾದ ಭಾಷೆಯಾಗಿರದೇ ಭಾರತದಾದ್ಯಂತ ಬಳಕೆ ಮಾಡುವ ಭಾಷೆಯಾಗಿದೆ. ಭಾಷೆ ಒಂದು ದೇಶದ ಸ್ಥಿತ್ಯಂತರಗಳಿಗೇ ಕಾರಣವಾಗಬಹುದು. ವಿವಿಧ ಸಂಘಗಳು ನಡೆಸುವ ಸದಭಿರುಚಿಯ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕಾಗಿಯೇ ಆಗಿದೆ ಎಂದು ತಿಳಿಸಿದರು.
ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಶ ಕುಮಾರ ಎಂ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಡಾ. ವೆಂಕಟೇಶ ಮಂಜುಳಗಿರಿ ಅವರನ್ನು ಸನ್ಮಾನಿಸಲಾಯಿತು.
‘ಸುರಭಾರತೀ ವೈಭವಂ’ ಕಾರ್ಯಕ್ರಮದ ಅಂಗವಾಗಿ ನಡೆಸಲಾಗುವ ವಿವಿಧ ಸ್ಪರ್ಧೆಗಳ ಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ನಾಯಕ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಸ್ಕೃತ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮುರಳಿ ಕೃಷ್ಣ ಸ್ವಾಗತಿಸಿ ಸಂಸ್ಕೃತ ಸಂಘದ ಅಧ್ಯಕ್ಷೆ ಪ್ರಣತಿ.ಕೆ ವಂದಿಸಿದರು.
ಸಂಸ್ಕೃತ ಸಂಘದ ಕಾರ್ಯದರ್ಶಿ ಕೃತಿಕಾ ಕೆ.ವಿ ನಿರೂಪಿಸಿದರು.

Related News

ಸಂಸ್ಕೃತದ ಅಧ್ಯಯನದಿಂದ ಮನಕ್ಕೆ ಆನಂದ— ಡಾ. ವೆಂಕಟೇಶ ಮಂಜುಳಗಿರಿ;

ಸಂಸ್ಕೃತದ ಅಧ್ಯಯನದಿಂದ ಮನಕ್ಕೆ ಆನಂದ— ಡಾ.…

ಪುತ್ತೂರು, ಸೆಪ್ಟೆಂಬರ್ 11: ವಿವೇಕದ ಜೊತೆಗೆ ಆನಂದ…

ನಮ್ಮ ಭಾವನೆಗಳನ್ನು ವ್ಯಕ್ತ ಪಡಿಸಲು ದೇಶಿಯ ಭಾಷೆಗಳಿಂದ ಮಾತ್ರ ಸಾಧ್ಯ- ಬಾಲಕೃಷ್ಣ ಹೆಚ್;

ನಮ್ಮ ಭಾವನೆಗಳನ್ನು ವ್ಯಕ್ತ ಪಡಿಸಲು ದೇಶಿಯ…

ಪುತ್ತೂರು : ಭಾಷೆ ಸಂಸ್ಕೃತಿಯನ್ನು ಪಸರಿಸುತ್ತದೆ. ಹಿಂದಿ…