News & Updates

ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಫೆಸ್ಟ್ ಏಕತ್ರ -2024

ಪುತ್ತೂರು, ಮೇ.22:
ಒಂದು ಉದ್ಯಮವನ್ನು ಯಶಸ್ವಿಯಾಗಿ ನಡೆಸಲು ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಆಗ ಅವುಗಳಿಗೆಲ್ಲ ಯೋಚಿಸಿ ಪರಿಹಾರವನ್ನು ಕಂಡುಕೊಂಡು ಮುಂದುವರೆಯುವ ಶಕ್ತಿ ನಮ್ಮಲ್ಲಿರಬೇಕು.ಉದ್ಯಮ ಕ್ಷೇತ್ರಕ್ಕೆ ಕೌಶಲ್ಯವೆನ್ನುವುದು ಅತ್ಯಗತ್ಯ. ಬದಲಾವಣೆಗೆ ನಾವು ಹೊಂದಿಕೊಂಡು ನಮ್ಮ ಕೆಲಸದಲ್ಲಿ ಹೊಸತನವನ್ನು ಕಂಡು ಯಶಸ್ವಿಗೊಳ್ಳಬೇಕು ಅದಕ್ಕಾಗಿ ನಿರಂತರವಾದ ಕಲಿಕೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ. ಆರ್ಥಿಕವಾಗಿ ಯಾರು ಕೂಡ ಬಲಿಷ್ಠರಾಗಬಹುದು ಆದರೆ,ಅದನ್ನು ಹೊರತುಪಡಿಸಿ ಸಮಾಜಕ್ಕೆ ಸೇವೆ ಮಾಡುವ ಜನರಿಗೆ ಒಳಿತನ್ನು ಮಾಡುವ ಗುಣ ನಮ್ಮದಾಗಬೇಕು ಎಂದು ಮಾಸ್ಟರ್ ಪ್ಲಾನರಿ ಪುತ್ತೂರು ಇದರ ಉದ್ಯಮಿ ಆಕಾಶ್ ಎಸ್. ಕೆ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ವಾಣಿಜ್ಯ ವಿಭಾಗ, ಕಾಮರ್ಸ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ ಏಕತ್ರ -2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ನಮ್ಮ ದೇಶ ವಿಶ್ವದಲ್ಲಿ ಮೂರನೇ ಬಲಿಷ್ಠ ರಾಷ್ಟ್ರವಾಗಿ ಮುಂದುವರಿಯುತ್ತಿದೆ. ಇದಕ್ಕೆ ವಾಣಿಜ್ಯ ಕ್ಷೇತ್ರ ಬಹುದೊಡ್ಡ ಕೊಡುಗೆಯನ್ನು ನೀಡಿದೆ. ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿಯುವುದನ್ನು ಪ್ರಾಯೋಗಿಕವಾಗಿ ಅನುಕರಣೆ ಮಾಡಬೇಕಾದರೆ ಶ್ರಮ ಪಡಬೇಕು, ನಮ್ಮಲ್ಲಿ ನೀತಿ ಮೌಲ್ಯಗಳಿರಬೇಕು. ನಾವು ಪ್ರತಿಯೊಂದು ಕೆಲಸದಲ್ಲೂ ಶಿಸ್ತನ್ನು ಕಾಪಾಡಿಕೊಂಡು ಮುಂದುವರೆಯಬೇಕು. ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ ಎನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು .
ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾನಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಉದ್ಯಮಿ ಆಕಾಶ್ ಎಸ್ ಕೆ ಹಾಗೂ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ ಭವ್ಯಶ್ರೀ ಇವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಗಾಗಿ ಸುಮಾರು 15ಕ್ಕೂ ಹೆಚ್ಚು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವೇದಿಕೆಯಲ್ಲಿ ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ. ಹೆಚ್. ಜಿ ಶ್ರೀಧರ್, ವಿಶೇಷ ಅಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ ಬಿ. ಕಾರ್ಯಕ್ರಮದ ವಿದ್ಯಾರ್ಥಿ ಸಂಯೋಜಕ ತೃತೀಯ ವಾಣಿಜ್ಯ ವಿಭಾಗದ ಪವನ್ ರಾಜ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕರಾದ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸ್ವಾತಿ ಪಿಎನ್ ಸ್ವಾಗತಿಸಿ ಭವ್ಯ ಹಿತೇಶ್ ಕುಮಾರ್ ವಂದಿಸಿ ಕಾವ್ಯಶ್ರೀ ನಿರ್ವಹಿಸಿದರು.

ಬಾಕ್ಸ್ ಐಟಂ:* ಏಕತ್ರ 2024 ಸ್ಪರ್ಧೆಯ ಸಮಗ್ರ ಪ್ರಶಸ್ತಿಯನ್ನು ದ್ವಿತೀಯ ಬಿಕಾಂ ಎ ಮತ್ತು ರನ್ನರ್ ಅಪ್ ಪ್ರಶಸ್ತಿಯನ್ನು ಪ್ರಥಮ ಬಿಕಾಂ ಸಿ ಪಡೆದುಕೊಂಡಿತು.

  • ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಿಸಿದ ಉದ್ಯಮಿ ಕೇಶವ ಅಮೈ ಹಾಗೂ ಕಾಲೇಜಿನ ಕಾವಲುಗಾರ ಸುಧಾಕರ ಅವರನ್ನು ಸನ್ಮಾನಿಸಲಾಯಿತು.

Related News

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿಕಾರ್ಯಾಗಾರ ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ…

ಪುತ್ತೂರು,ಜು.15: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು.ನಾವು…

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಪುತ್ತೂರು.ಜು,15: ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆದೊರಕಬೇಕೆಂದರೆ ಅಲ್ಲಿ…

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ತ್ತೂರು:ಜು.13; ವಿಶೇಷ ಮೌಲ್ಯಗಳುಳ್ಳಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳುಹಾಗೂ…