News & Updates

ವಿವೇಕಾನಂದ ಕಾಲೇಜಿನ ಸ್ನಾತಕೋತ್ತರಪತ್ರಿಕೋದ್ಯಮ ಮತ್ತು ಸಮೂಹ ಸಂವಹನವಿಭಾಗದ ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನ

ಪುತ್ತೂರು ಜೂ,13 : ಮಂಗಳೂರು ವಿಶ್ವವಿದ್ಯಾನಿಲಯ 2023ರ
ಜುಲೈ ತಿಂಗಳಿನಲ್ಲಿ ನಡೆಸಿದ ಅಂತಿಮ ಸ್ನಾತಕೋತ್ತರ ಪದವಿ
ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ವಿವೇಕಾನಂದ
(ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ
ದಿವ್ಯಾ ಶ್ರೀ ರೈ ಪ್ರಥಮ ರಾಂಕ್ ನೊಂದಿಗೆ ಎರಡು ಚಿನ್ನದ ಪದಕ,
ದಕ್ಷಿಣ ಕನ್ನಡ ಫಿಲಂ ಫೆಸ್ಟಿವಲ್ 1988 ಬಹುಮಾನ, ಪಬ್ಲಿಕ್ ರಿಲೇಶನ್
ಸೊಸೈಟಿ ಆಫ್ ಇಂಡಿಯಾ ಕ್ಯಾಶ್ ಪ್ರೈಸ್, ಎಂ ಸಿ ಜೆ ಸಿಲ್ವರ್ ಜುಬಿಲಿ ಕ್ಯಾಶ್
ಪ್ರೈಸ್ ಇತ್ಯಾದಿ ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.
ವಿಭಾಗದ ಇನ್ನೋರ್ವ ವಿದ್ಯಾರ್ಥಿನಿ ಸೋನಿಕಾ ಫೋಟೋಗ್ರಾಫಿ ಅಂಡ್
ಫೋಟೋ ಜರ್ನಲಿಸಂ ವಿಷಯದಲ್ಲಿ ಅತೀ ಹೆಚ್ಚು ಅಂಕಗಳನ್ನು
ಗಳಿಸಿ ಎಂ ಸಿ ಜೆ ಸಿಲ್ವರ್ ಜುಬಿಲಿ ಕ್ಯಾಶ್ ಪ್ರೈಸ್ ಪಡೆದುಕೊಂಡಿದ್ದಾರೆ.
ಇವರಿಗೆ ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಆಡಳಿತ
ಮಂಡಳಿಯ ಅದ್ಯಕ್ಷರು, ಸಂಚಾಲಕರು, ಸರ್ವ ಸದಸ್ಯರು,
ಪ್ರಾಂಶುಪಾಲರು, ನಿರ್ದೇಶಕರು, ಡೀನ್, ಸ್ನಾತಕೋತ್ತರ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ
ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು
ಶುಭಕೋರಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಅಭಿಯಾನ;

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’…

ಪುತ್ತೂರು, ನ. 24; ನಶೆ ಮತ್ತು ಮದ್ಯವ್ಯಸನ…

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ. ರಾಜೇಶ್ವರಿ ಎಂ:ಇoಟರ್ನೆಟ್ ಆಫ್ ಥಿಂಗ್ಸ್ (ಐಓಟಿ) ಹ್ಯಾಂಡ್ಸ್-ಆನ್ ಕಾರ್ಯಾಗಾರ ಉದ್ಘಾಟನೆ;

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ.…

ಪುತ್ತೂರು ನ.24: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಆಫ್…

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ…

ಪುತ್ತೂರು. ನ. 22: ಮನುಷ್ಯ ಯಾವಾಗ ನೈತಿಕ…