ಡಿಜಿಟಲ್ ಮಾರ್ಕೆಟಿಂಗ್ ವಿಸ್ತಾರವಾದ ವ್ಯಾಪ್ತಿಯನ್ನು ಹೊಂದಿದೆ: ಪ್ರವೀಣ್ ಉಡುಪ
ಪುತ್ತೂರು : ಇಲ್ಲಿನ ವಿವೇಕಾನಂದ ಕಾಲೇಜಿನ ಐಟಿ ಕ್ಲಬ್ ಆಶ್ರಯದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಬಗೆಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಉಡುಪಿಯ A1 ಲಾಜಿಕ್‌ನ ತಾಂತ್ರಿಕ ನಿರ್ದೇಶಕ ಪ್ರವೀಣ್ ಉಡುಪ ಡಿಜಿಟಲ್ ಮಾರ್ಕೆಟಿಂಗ್‌ನ ಬೇರೆ ಬೇರೆ ವಿಧಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಇತ್ತೀಚಿನ ದಿನಗಳಲ್ಲಿ ಹೇಗೆ ಡಿಜಿಟಲ್ ಮಾರ್ಕೆಟಿಂಗ್ ತಂತ್ರಜ್ಞಾನವನ್ನು ಮಾರುಕಟ್ಟೆಯಲ್ಲಿ ಬಳಸಿಕೊಳ್ಳಬಹುದು ಹಾಗೂ ಗೂಗಲ್ ನಂತಹ ಶೋಧ ತಾಣಗಳು ಮತ್ತು ಸಾಮಾಜಿಕ ಜಾಲ ತಾಣಗಳು ಡಿಜಿಟಲ್ ಮಾರ್ಕೆಟಿಂಗ್‌ಗೆ ಯಾವ ರೀತಿಯಲ್ಲಿ ಸಹಾಯಕಾರಿಯಾಗುತ್ತವೆ ಎಂಬುದನ್ನು ಪ್ರವೀಣ್ ಉಡುಪ ತಿಳಿಸಿದರು.
ಕಾರ್ಯಕ್ರಮದಲ್ಲಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್, ಐಟಿ ಕ್ಲಬ್ ಸಂಚಾಲಕ ವಿಕ್ರಾಂತ್ ಉಪಸ್ಥಿತರಿದ್ದರು. ಉಪನ್ಯಾಸಕ ಗುರುಕಿರಣ್ ಭಟ್ ಸ್ವಾಗತಿಸಿ, ವಿದ್ಯಾರ್ಥಿ ಶ್ರೇಯಾ ವಂದಿಸಿದರು.