VIVEKANANDA COLLEGE of Arts, Science and Commerce (Autonomous) Puttur

Re - accredited at 'A' Grade by the NAAC with 3.30 CGPA

Recognised as the College with Potential for Excellence (CPE) by the UGC

| +91 8251 230 455 | Kannada

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ ದಿನ

                                                                                     ಜಗತ್ತಿಗೆ ಶಾಂತಿಯ ಮಂತ್ರವನ್ನು ಬಿತ್ತಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದ-ಕಿಶೋರ್ ಕುಮಾರ್ ಕೊಡ್ಗಿ
ಪುತ್ತೂರು: ಜುಲೈ22: ವಿವೇಕಾನಂದರ ಹೆಸರು ಕೇಳಿದ ಕೂಡಲೇ ಮೈ ರೋಮಾಂಚನಗೊಳ್ಳುತ್ತದೆ. ಇಡೀ ಜಗತ್ತಿಗೆ ಶಾಂತಿಯ ಮಂತ್ರವನ್ನು ಬಿತ್ತಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರು. ಇಂತಹ ಅದ್ಭುತ ವ್ಯಕ್ತಿಯ ಜೀವನವನ್ನು ವಿದ್ಯಾರ್ಥಿಗಳೆಲ್ಲರೂ ಅಧ್ಯಯನ ಮಾಡಿ ಅವರಲ್ಲಿ ಇದ್ದಂತಹ ಆದರ್ಶಗಳನ್ನು ಮೌಲ್ಯಗಳನ್ನು ಕಡ್ಡಾಯವಾಗಿ ಮೈಗೂಡಿಸಿಕೊಳ್ಳಬೇಕು. ಹಾಗೂ ಸಂತ ವಿವೇಕಾನಂದರAತಹ ಅಪೂರ್ವ ವ್ಯಕ್ತಿತ್ವ ವಿದ್ಯಾರ್ಥಿಗಳೆಲ್ಲರಿಗೂ ಮಾದರಿ. ಸ್ವಾಮಿ ವಿವೇಕಾನಂದರ ಶ್ರೇಷ್ಟ ಚಿಂತನೆಗಳು ನಮಗೆಲ್ಲರಿಗೂ ಸ್ಪೂರ್ತಿಯಾಗಬೇಕು. ಆಗ ನಮ್ಮೊಳಗಿನ ವ್ಯಕ್ತಿತ್ವವೂ ಅದ್ಭುತವಾಗಿ ವಿಕಸನಗೊಳ್ಳುತ್ತವೆ ಎಂದು ಮಂಗಳೂರಿನ ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.


ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕರ‍್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶುಕ್ರವಾರ ಮಾತನಾಡಿದರು. ಯುವ ಜನತೆ ಕೃಷಿಗೂ ಒತ್ತು ನೀಡಬೇಕು
ವಿದ್ಯಾರ್ಥಿ ಸಂಘ ಎಂದರೆ ಭವಿಷ್ಯದ ರಾಷ್ಟç ನಾಯಕರ ಸಂಘ. ವಿದ್ಯಾರ್ಥಿ ನಾಯಕರು ನಾಯಕತ್ವವನ್ನು ಬೆಳೆಸಿಕೊಂಡು ದೇಶಕ್ಕೆ ಮಾದರಿಯಾಗಬೇಕು. ಜ್ಞಾನದೊಂದಿಗೆ ಆತ್ಮವಿಶ್ವಾಸವನ್ನು ಹೆಚ್ಚಿಕೊಂಡು ಸಮಾಜ ಸೇವೆಯನ್ನು ಮಾಡಲು ತಯಾರಾಗಬೇಕು. ಅಂತೆಯೇ ಶಿಕ್ಷಣವನ್ನು ಅಧ್ಯಯನ ಮಾಡುವುದರ ಜೊತೆಗೆ ಯುವ ಜನತೆ ಕೃಷಿಯ ಬಗೆಗೂ ಆಸಕ್ತಿ ನೀಡಿದರೆ ಉತ್ತಮ. ಯಾಕೆಂದರೆ ಕೃಷಿಯಿಂದಲೂ ಅತ್ಯಂತ ಸಂತೃಪ್ತಿ ಜೀವನ ನಡೆಸಲು ಸಾಧ್ಯ ಎಂದು ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು,
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ಮಾತನಾಡಿ ವಿವೇಕಾನಂದ ಕಾಲೇಜು ಬಹಳಷ್ಟು ವರ್ಷಗಳಿಂದ ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಅನೇಕ ಸಾಧನೆಗಳನ್ನು ಮಾಡಿಕೊಂಡು ಬಂದಿದೆ. ಒಂದಷ್ಟು ಶೈಕ್ಷಣಿಕ ಒತ್ತಡಗಳ ಮಧ್ಯೆಯೂ ಈ ಬಾರಿಯೂ ಕಾಲೇಜು ರಾಷ್ಟಿçÃಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಂತೆಯೇ ವಿದ್ಯಾರ್ಥಿಗಳೆಲ್ಲರೂ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕರ‍್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಉತ್ತಮ ಜೀವನಕ್ಕಾಗಿ ಚಾಣಕ್ಯನ ಸೂತ್ರಗಳನ್ನು ಜೀವನದಲ್ಲಿ ಅನುಸರಿಸಬೇಕು. ಏಕಾಗ್ರತೆ, ನಿಯತ್ತು ಹಾಗೂ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು. ಅಲ್ಲದೇ ಯಾವುದೇ ಕೆಟ್ಟ ಚಟಗಳಿಂದ ಸಮಾಜದ ಅಗೌರವಕ್ಕೆ ಪಾತ್ರರಾಗದೇ ಉತ್ತಮ ವ್ಯಕ್ತಿಯಾಗಿ ಸಮಾಜದಲ್ಲಿ ಕಾಣಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ವಿಕಸನ ಪತ್ರಿಕೆ
ಈ ಸಂದರ್ಭದಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ “’ವಿಕಸನ”’ ಎನ್ನುವ ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಬಹುಮಾನ ವಿತರಣೆ ಕರ‍್ಯಕ್ರಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯಲ್ಲಿ ವಿಜೇರಾದವರಿಗೆ ಬಹುಮಾನ ವಿತರಿಸಲಾಯಿತು.ಜೊತೆಗೆ ಪ್ರಸ್ತುತ ಸಾಲಿನಲ್ಲಿ ಕ್ರೀಡೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ವಿಜೇತರಾದವರಿಗೆ ಸನ್ಮಾನ ಮಾಡಲಾಯಿತು. ವಿದ್ಯಾಥಿಗಳಿಗೆ ದತ್ತಿನಿಧಿ ಬಹುಮಾನಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೋ. ವಿಷ್ಣು ಗಣಪತಿ ಭಟ್ ಉಪಸ್ಥಿತರಿದ್ದರು. ಕರ‍್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿ ಉಪನ್ಯಾಸಕ, ಉಪನ್ಯಾಸಕೇತರ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ಜೊತೆ ಕರ‍್ಯದರ್ಶಿ ತನುಶ್ರೀ ಬೆಳ್ಳಾರೆ ಸ್ವಾಗತಿಸಿ, ಕರ‍್ಯದರ್ಶಿ ವಚನ್ ಶೆಟ್ಟಿ ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ.ಗೀತಾ ಕುಮಾರಿ ಟಿ ಹಾಗೂ ಪ್ರೀತಿ ಭಟ್ ಕರ‍್ಯಕ್ರಮವನ್ನು ನಿರೂಪಿಸಿದರು. ಕರ‍್ಯದರ್ಶಿ ಆಶೀಶ್ ಎನ್.ಎಂ ವಾರ್ಷಿಕ ವರದಿ ವಾಚಿಸಿದರು. ಸಭಾ ಕರ‍್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮ ನಡೆಯಿತು.