ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ಇಂದಿನ ಯಾಂತ್ರಿಕ ಬದುಕಿನಲ್ಲಿ ಮಾನಸಿಕ ಒತ್ತಡವನ್ನು ನಿಭಾಯಿಸುವುದು ಬಹು ಮುಖ್ಯವಾದದ್ದು, ಈ ಮಾನಸಿಕ ಒತ್ತಡದಿಂದ ಪ್ರತಿಯೊಬ್ಬರೂ ಹಲವಾರು ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಒಳಗಾಗುತ್ತಾರೆ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸ್ತಾತಕೋತ್ತರ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಮೀನಾಕುಮಾರಿ ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಇತ್ತೀಚೆಗೆ ಮಾನಸಿಕ ಒತ್ತಡ ಮತ್ತು ನಿರ್ವಹಣೆ ಎಂಬ ವಿಷಯದ ಬಗೆಗೆ ಅತಿಥಿ ಉಪನ್ಯಾಸ ನೀಡಿ ಮಾನಸಿಕ ಒತ್ತಡಗಳನ್ನು ನಿಭಾಯಿಸುವ ಪರಿಹಾರೋಪಾಯಗಳನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಬಾಗದ ಉಪನ್ಯಾಸಕಿ ವಿಜಯಸರಸ್ವತಿ ಮಾತನಾಡಿ ಪ್ರತಿಯೊಬ್ಬರೂ ಮಾನಸಿಕ ಒತ್ತಡವನ್ನು ಸರಿಯಾಗಿ ನಿಭಾಯಿಸುವುದು ಅಗತ್ಯ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿದ್ದರು. ವಿದ್ಯಾರ್ಥಿನಿ ರಕ್ಷಾ ಎ ಆರ್ ಪ್ರಾರ್ಥಿಸಿದರು. ಶ್ರೀವತ್ಸ ಗೋಖಲೆ ಸ್ವಾಗತಿಸಿ, ಶ್ರುತಿ ವಂದಿಸಿದರು. ರಯ್ಲಿನ್ ನಿತೀಶ ವೇಗಸ್ ಕಾರ್ಯಕ್ರಮ ನರ್ವಹಿಸಿದರು.