ವಿವೇಕಾನಂದ ಕಾಲೇಜಿನಲ್ಲಿ ಒಂದು ದಿನದ ಕಾರ್ಯಗಾರ
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ನ್ಯಾನೋ ಕಾರ್ಬನ್ಸ್ ಎಂಬ ವಿಷಯದ ಕುರಿತು ಕಾರ್ಯಗಾರ ಕಾಲೇಜಿನ ಪಿಜಿ ಸೆಮಿನಾರ್ ಹಾಲ್‍ನಲ್ಲಿ ನಡೆಯಿತು.
ಸುರತ್ಕಲ್‍ನ ಎನ್‍ಐಟಿಕೆಯ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಬಿ ರಾಮಚಂದ್ರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಪ್ರೀತಿ ಉಪಸ್ಥಿತರಿದ್ದರು.