ವಿವೇಕಾನಂದ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಪುತ್ತೂರು.ಜ 10: ತಾಂತ್ರಿಕ ಯುಗದಲ್ಲಿ ಮಾಹಿತಿಗಳು ಸ್ಫೋಟ ಆಗುತ್ತಿವೆ, ಯುವಪೀಳಿಗೆ ಸ್ವಯಂಸೇವೆ ಹಾಗೂ ಸ್ವಯಂಸೇವಾ ಸಂಘಟನೆಗಳ ಬಗ್ಗೆ ಮಾಹಿತಿ ಪಡೆದು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸೇವೆಯೆಂದರೆ ಅಪೇಕ್ಷೆ ಇಲ್ಲದೆ ಮಾಡುವ ಕಾರ್ಯ ಎಂದು ಪುತ್ತೂರಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಮೀನಾಕ್ಷಿ ಹೇಳಿದರು.
ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಮತ್ತು ಕಾಲೇಜಿನ ರೆಡ್‌ಕ್ರಾಸ್ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸೋಮವಾರ ಅವರು ಮಾತನಾಡಿದರು.
ರೆಡ್ ಕ್ರಾಸ್ ಘಟಕದ ಇತಿಹಾಸ ತಿಳಿದಾಗ ಹೆಚ್ಚು ಗಂಭೀರತೆ ಮತ್ತು ಕಾಳಜಿಯಿಂದ ಕೆಲಸ ಮಾಡಲು ಸಹಾಯವಾಗುವುದು. ಈ ಘಟಕವು ಭಾರತದಲ್ಲಿ ಮಾತ್ರವಲ್ಲದೆ ಅಂತರಾಷ್ಟಿçÃಯ ಮಟ್ಟದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಘಟಕದ ಮೂಲ ಉದ್ದೇಶ ಯುದ್ಧದಲ್ಲಿ ಗಾಯಗೊಂಡವರಿಗೆ ಶುಶ್ರೂಷೆ ಮಾಡುವುದಾಗಿತ್ತು. ಪ್ರಸ್ತುತ ಕಾಲಘಟ್ಟದಲ್ಲಿ ರೆಡ್‌ಕ್ರಾಸ್ ಘಟಕ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯದ ಅರಿವು ಮೂಡಿಸುವುದರ ಜೊತೆಗೆ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ನೀಡುವಂತಹ ಉತ್ತಮ ಕೆಲಸವನ್ನು ರೆಡ್‌ಕ್ರಾಸ್ ಘಟಕ ಮಾಡುತ್ತಿದೆ. ಮನುಷ್ಯ ಮಾನವೀಯತೆಯನ್ನು ಮರೆತು ಸ್ವಾರ್ಥಕ್ಕಾಗಿ ಬದುಕುತ್ತಿದ್ದಾನೆ. ಸ್ವಾರ್ಥದಿಂದ ಇನ್ನೊಬ್ಬರಿಗೆ ತೊಂದರೆಗಳು ಹೆಚ್ಚು ಹಾಗಾಗಿ ನಮ್ಮ ಮನಸ್ಸು ಸ್ವಾರ್ಥದ ಕಡೆಗೆ ಹೋಗದಂತೆ ಹಿಡಿತದಲ್ಲಿಟ್ಟುಕೊಂಡು ಸೇವಾ ಮನೋಭಾವವನ್ನು ನಮ್ಮಲ್ಲಿ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ರೆಡ್‌ಕ್ರಾಸ್ ಘಟಕ್ಕೆ ನಿಬಂಧನೆಗಳಿದ್ದು ಸರಕಾರದ ಯೋಜನೆಗಳನ್ನು ತಿಳಿದುಕೊಂಡು ಕೆಲಸಗಳನ್ನು ಮಾಡುತ್ತಿವೆ. ಎನ್.ಎಸ್.ಎಸ್., ಎನ್.ಸಿ.ಸಿ., ರೋವರ್ಸ್ ರೇಂಜರ್ಸ್, ರೆಡ್‌ಕ್ರಾಸ್ ಮೊದಲಾದ ರಾಷ್ಟಿçÃಯ ಮಟ್ಟದ ಸಂಸ್ಥೆಗಳು ಪ್ರತಿಯೊಂದು ಕಾಲೇಜುಗಳಲ್ಲಿ ಇರಬೇಕು. ಇದರಿಂದ ರಾಜ್ಯಮಟ್ಟ ಮತ್ತು ರಾಷ್ಟçಮಟ್ಟದಲ್ಲಿ ಭಾಗವಹಿಸಲು ಅವಕಾಶಗಳು ಸಿಗುವುದು. ಅಸಹಾಯಕರಿಗೆ ಸಹಾಯ ಮಾಡುವುದನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಕಾಲೇಜಿನಲ್ಲಿ ಉಪನ್ಯಾಸಕರು ಆಯೋಜಿಸುವ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕೇವಲ ಅಂಕಗಳಿಗಾಗಿ ಅಲ್ಲದೆ ವ್ಯಕ್ತಿತ್ವ ವಿಕಸನಕ್ಕೆ ಮತ್ತು ಸಾಧನೆಯ ಹಾದಿಗೆ ಇಂತಹ ಘಟಕಗಳು ಪೂರಕವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ, ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಮತ್ತು ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಘಟಕದ ಸದಸ್ಯರಾದ ಕೃತಿಕ, ಪದ್ಮಿನಿ ಪ್ರಾರ್ಥಿಸಿದರು. ಸಂಗೀತ ಸ್ವಾಗತಿಸಿದರು. ಅಕ್ಷಿತಾ ವಂದಿಸಿ, ದೇವಿಕಾ ಕಾರ್ಯಕ್ರಮವನ್ನು ನಿರೂಪಿಸಿದರು .