ವಿವೇಕಾನಂದದಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಮಹಾಸಭೆ
ಪುತ್ತೂರು : ಹಿರಿಯ ವಿದ್ಯಾರ್ಥಿಗಳಿಗೆ ತಾವು ಓದಿದ ಸಂಸ್ಥೆಯಲ್ಲಿ ನಾನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಕ್ಕೆ ಸಾಕಷ್ಟು ಅವಕಾಶವಿದೆ. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ, ವಿಶೇಷ ಉಪನ್ಯಾಸ ಕಾರ್ಯಕ್ರಮಗಳೇ ಮೊದಲಾದ ವಿಚಾರಗಳನ್ನು ಅನುಷ್ಠಾನಗೊಳಿಸಬಹುದು ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ತಾಳ್ತಜೆ ವಸಂತ ಕುಮಾರ ಕೇಳಿದರು.
ಅವರು ಕಾಲೇಜಿನಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ವಿದ್ಯಾರ್ಥಿ, ಕಾಲೇಜಿನ ಆಡಳಿತ ಮಂಡಳಿ ಕೋಶಾಧಿಕಾರಿ ಹಿರಿಯ ವಿದ್ಯಾರ್ಥಿ ಸಂಘ ಕೇವಲ ಸಭೆಗಳಿಗಷ್ಟೇ ಸೀಮಿತವಾಗದೆ ಗಿಡನೆಡುವ ಕಾರ್ಯಕ್ರಮ, ಸ್ವಚ್ಚತಾ ಆಂದೋಲನ ಮೊದಲಾದ ಕಾರ್ಯಕ್ರಮಗಳಿಗೂ ಮುಂದಾಗಬೇಕು. ನಮ್ಮದೇ ಇತರ ವಿದ್ಯಾಸಂಸ್ಥೆಗಳಿಗೆ ಭೇಟಿ ಕೊಟ್ಟು ಅಲ್ಲಿನ ಕುಂದುಕೊರತೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು. ಆಗ ಹಿರಿಯ ವಿದ್ಯಾರ್ಥಿಗಳ ಸಂಘಕ್ಕೆ ಹೆಚ್ಚಿನ ಗೌರವಕ್ಕೆ ಪಾತ್ರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮತ್ತೋರ್ವ ಹಿರಿಯ ವಿದ್ಯಾರ್ಥಿ, ನಾಗರಿಕ ಸೇವಾ ತರಬೇತಿ ಸಂಸ್ಥೆ ಯಶಸ್‌ನ ಅಧ್ಯಕ್ಷ ಮುರಳಿಕೃಷ್ಣ ಚಳ್ಳಂಗಾರು, ಹಿರಿಯ ವಿದ್ಯಾರ್ಥಿ, ಚಾರ್ಟರ್‍ಡ್ ಅಕೌಂಟೆಂಟ್ ಗಣೇಶ್ ಭಟ್ ಅಭಿಪ್ರಾಯ ವ್ಯಕ್ತಪಡಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸರಸ್ವತಿ ಸಿ.ಕೆ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ನಿರ್ಮಲಾ ಜನಾರ್ಧನ್ ಲೆಕ್ಕಪತ್ರ ಮಂಡಿಸಿದರು.
ಕಾಲೇಜಿನ ಪ್ರಾಚಾರ್ಯ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಪ್ರಸ್ತಾವನೆಗೈದು, ಸ್ವಾಗತಿಸಿದರು. ಸಂಘದ ಸದಸ್ಯ ಡಾ.ಅರುಣ್ ಪ್ರಕಾಶ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಕಾರ್ಯಕ್ರಮದ ಮೊದಲಿಗೆ ಇತ್ತೀಚೆಗೆ ಅಗಲಿರುವ ಹಿರಿಯ ಸ್ವರ್ಣೋದ್ಯಮಿ ಜಿ.ಎಲ್ ಆಚಾರ್ಯ ಅವರಿಗೆ ನುಡಿನಮನ ಸಲ್ಲಿಸಿ ಆತ್ಮಕ್ಕೆ ಸದ್ಗತಿ ಕೋರಲಾಯಿತು.