ವಿವೇಕಾನಂದದಲ್ಲಿ ವಾರ್ಷಿಕ ಕ್ರೀಡಾಕೂಟ
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಾಷಿಕ ಕ್ರೀಡಾಕುಟ ಇತ್ತೀಚೆಗೆ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಪುತ್ತೂರಿನ ಚಾರ್ಟರ್ಡ್ ಅಕೌಂಟೆಂಟ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಗಣೇಶ್ ಜೋಷಿ ಉದ್ಘಾಟಕರಾಗಿ ಆಗಮಿಸಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ವಹಿಸಿದ್ದರು. ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ಆನಂದ ಹಾಗು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಪ್ರೊ.ಎಸ್.ಈಶ್ವರ ಭಟ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರುಗಳಾದ ರವಿಶಂಕರ್ ವಿ.ಎಸ್ ಹಾಗೂ ಡಾ.ಜ್ಯೋತಿಕುಮಾರಿ ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಹಿರಿಯ ವಿದ್ಯಾರ್ಥಿ ರಾಕೇಶ್ ರೈ ಅತಿಥಿಯಾಗಿ ಪಾಲ್ಗೊಂಡರು.