ಅವಕಾಶವನ್ನು ಉತ್ತಮವಾಗಿ ಬಳಸಿ : ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಪುತ್ತೂರು: ಪ್ರತಿಭಾ ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆಯನ್ನು ತೊರ್ಪಡಿಸಲು ಸಹಕಾರಿಯಾಗಿದೆ. ಹಾಗಾಗಿ ಸೋಲು – ಗೆಲುವು ಮುಖ್ಯವಾಗುವುದಿಲ್ಲ. ಸಿಕ್ಕಿರುವ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕೇ ಹೊರತು ಅದರಿಂದ ಯಾರ ಮನಸ್ಸನ್ನು ನೋಯಿಸುವಂತಾಗಬಾರದು ಎಂದು ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ಅವರು ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು.
ಲಲಿತ ಕಲಾ ಸಂಘದ ಸಂಯೋಜಕಿ ವಿದ್ಯಾ ಎಸ್. ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.