VIVEKANANDA COLLEGE, PUTTUR

Re - accredited at 'A' Grade by the NAAC with 3.30 CGPA

Recognised as the College with Potential for Excellence (CPE) by the UGC

| +91 8251 230 455 | Kannada

ವಿದ್ಯಾರ್ಥಿಗಳು ಅವಕಾಶಗಳನ್ನು ಬಾಚಿಕೊಳ್ಳಬೇಕು: ವಾಮನ್ ಪೈ

Vaman Paiಪುತ್ತೂರು: ಅವಕಾಶಗಳನ್ನು ಬಾಚಿಕೊಳ್ಳುವ ಸಾಮರ್ಥವನ್ನು ವಿದ್ಯಾರ್ಥಿಗಳು ಹೊಂದಬೇಕು. ನಾಯಕತ್ವ ಗುಣ, ವೈವಿಧ್ಯಮಯವಾದ ಕಲೆ, ಸಂಸೃತಿಯನ್ನು ವಿದ್ಯಾರ್ಥಿ ಜೀವನದ ಜೊತೆಗೆ ಬೆಳೆಸಬೇಕು ಎಂದು ವಿವೇಕಾನಂದ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ನಿರ್ದೇಶಕ ವಾಮನ್ ಪೈ ಹೇಳಿದರು.

          ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ವಿಭಾಗದ ಆಶ್ರಯದಲ್ಲಿ  ಕನಕಾಂ ಸುವರ್ಣ ವರ್ಷಕ್ಕೊಂದು ಸುವರ್ಣ ಗರಿ ಎಂಬ ಅಂತರ್ ತರಗತಿ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಬುಧವಾರ ಮಾತನಾಡಿದರು.

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್ ಮಾತನಾಡಿ ತರಗತಿಯ ವ್ಯಾಪ್ತಿಗಿಂತ ಹೊರಗೆ ಕಲಿತುಕೊಳ್ಳಬೇಕಾದ ಉತ್ತಮವಾದ ವಿಷಯಗಳು ಬೇಕಾದಷ್ಟು ಇರುತ್ತದೆ. ಅದಕ್ಕಾಗಿ ಉತ್ತಮ ಅವಕಾಶವನ್ನು ಬಳಸಿಕೊಳ್ಳಬೇಕು. ಆ ಮೂಲಕ ನಮ್ಮನ್ನು ನಾವು ಗುರುತಿಸಿಕೊಳ್ಳಬೇಕು ಎಂದರು.

          ಈ ಸಂದರ್ಭದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ವೆಂಕಟ್ರಮಣ ಭಟ್ ಹಾಗು ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ. ಆನಂದ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿಯರಾದ ಅಮೃತ ಸ್ವಾಗತಿಸಿ, ಮನುಲೇಖಾ ವಂದಿಸಿದರು. ಅಕ್ಷತಾ ಪ್ರಾರ್ಥಿಸಿ, ವಿಲ್ಮಾ ನಿರೂಪಿಸಿದರು.