ವಿವೇಕಾನಂದದಲ್ಲಿ ರಕ್ತದಾನ ಶಿಬಿರ
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಮಾನವಿಕ ಸಂಘ ಹಾಗೂ ಪುತ್ತೂರಿನ ರೋಟರಿ ಕ್ಲಬ್‌ಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ಒಟ್ಟು ೭೬ ಮಂದಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ೭೬ ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ರೋಟರಿ ಬ್ಲಡ್ ಬ್ಯಾಂಕ್‌ನ ವೈದ್ಯ ಡಾ.ರಾಮಚಂದ್ರ ಭಟ್ ಮಾಹಿತಿ ನೀಡಿ ೪೫ ಕೆ.ಜಿ. ತೂಕಕ್ಕಿಂತ ಹೆಚ್ಚು ತೂಕವಿರುವವರು ರಕ್ತದಾನ ಮಾಡಬಹುದಾಗಿದೆ ಎಂದು ತಿಳಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಕೃಷ್ಣ ಕಾರಂತ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಹರಿಪ್ರಸಾದ್ ಸ್ವಾಗತಿಸಿದರು. ಮತ್ತೋರ್ವ ಸಂಯೋಜಕ ಡಾ.ಅರುಣ್ ಪ್ರಕಾಶ್ ವಂದಿಸಿದರು.