ಡಾ.ವಿಘ್ನೇಶ್ವರ ವರ್ಮುಡಿಯವರ ಕೃತಿ ಲೋಕಾರ್ಪಣೆ
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ, ಕೃಷಿ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ರಚಿಸಿದ ರೈತರ ಆತ್ಮಹತ್ಯೆ – ಕಾರಣಗಳು ಮತ್ತು ಪರಿಹಾರೋಪಾಯಗಳು ಎಂಬ ಕೃತಿ ಬುಧವಾರ ಕಾಲೇಜಿನಲ್ಲಿ ಲೋಕಾರ್ಪಣೆಗೊಂಡಿತು.
ವಿವೇಕಾನಂದ ಸಂಶೋಧನಾ ಕೇಂದ್ರ ಹಾಗೂ ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ರೈತರ ಆತ್ಮಹತ್ಯೆ ವಿಚಾರವಾಗಿ ನಡೆದ ರಾಜ್ಯಮಟ್ಟದ ವಿಚಾರ ಮಂಡನಾ ಕಾರ್ಯಕ್ರಮದ ಸಂದರ್ಭದಲ್ಲಿ ಶಿವಮೊಗ್ಗದ ಕೃಷಿ ಹಾಗೂ ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿ ಡಾ. ವಾಸುದೇವಪ್ಪ ಕೃತಿಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಗೌರವಾಧ್ಯಕ್ಷ ಕೆ.ರಾಮ ಭಟ್, ಶಿವಮೊಗ್ಗದ ನಿವೃತ್ತ ಪ್ರಾಚಾರ್ಯ ಪ್ರೊ. ಕುಮಾರ ಸ್ವಾಮಿ, ವಿವೇಕಾನಂದ ಸಂಶೋಧನಾ ಕೇಂದ್ರದ ಕಾರ್ಯಾಧ್ಯಕ್ಷ ವಿ.ವಿ.ಭಟ್, ಐಎಎಸ್, ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ, ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ಕೃತಿಕಾರ ಡಾ.ವಿಘ್ನೇಶ್ವರ ವರ್ಮುಡಿ, ಅರ್ಥಶಾಸ್ತ್ರ ಉಪನ್ಯಾಸಕ ವಾಸುದೇವ ಎನ್ ಹಾಜರಿದ್ದರು.