VIVEKANANDA COLLEGE of Arts, Science and Commerce (Autonomous) Puttur

Re - accredited at 'A' Grade by the NAAC with 3.30 CGPA

Recognised as the College with Potential for Excellence (CPE) by the UGC

| +91 8251 230 455 | Kannada

ವಿದ್ಯಾರ್ಥಿ ಜೀವನದ ಸದ್ಬಳಕೆಯಿಂದ ಭವಿಷ್ಯ ಸುಭದ್ರ: ಚೇತನ್ ನಾಯಕ್

ಪುತ್ತೂರು: ವಿದ್ಯಾರ್ಥಿಯಾದವನು ಕಾಲೇಜು ಜೀವನವನ್ನು ಸರಿಯಾದ ರೀತಿಯನ್ನು ಬಳಕೆ ಮಾಡಿಕೊಂಡರೆ ಭವಿಷ್ಯದ ಬದುಕಿಗೆ ಭದ್ರ ತಳಪಾಯವನ್ನು ಹಾಕುವುದಕ್ಕೆ ಸಾಧ್ಯ. ಆದ್ದರಿಂದ ಶೈಕ್ಷಣಿಕ ಬದುಕನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗು ಮುಂದುವರಿಯಬೇಕು ಎಂದು ಮಂಗಳೂರಿನ ಖಾಸಗಿ ಕಂಪೆನಿಯ ಕಾರ್ಯದರ್ಶಿ ಚೇತನ್ ನಾಯಕ್ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ವಾಣಿಜ್ಯ ಮತ್ತು ವ್ಯವಹಾರ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ  ಗುರುವಾರ ಮಾತನಾಡಿದರು.

ಆಧುನಿಕ ಜಗತ್ತಿನಲ್ಲಿ ವಾಣಿಜ್ಯ ಮತ್ತು ವ್ಯವಹಾರ ವಿಷಯಗಳನ್ನು ಅಧ್ಯಯನ ಮಾಡಿದವರಿಗೆ ಸಾಕಷ್ಟು ಅವಕಾಶಗಳಿವೆ. ಆದರೆ ಅಂತಹ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ನಮ್ಮ ಶ್ರಮವೂ ಅತ್ಯಂತ ಅಗತ್ಯ. ಸಸತ ಶ್ರಮದಿಂದ ಅಧ್ಯಯನ ನಡೆಸುವವನಿಗೆ ಉತ್ತಮ ಬದುಕು ಕಾದಿರುತ್ತದೆ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ ಮಾತನಾಡಿ ಈಗಿನ ಕಾಲದಲ್ಲಿ ಹೆಣ್ಣುಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡುತ್ತಿದ್ದಾರೆ. ಗಂಡುಮಕ್ಕಳು ಹೆಣ್ಣು ಮಕ್ಕಳಿಗೆ ಸ್ಪರ್ಧೆಯ ಅವಕಾಶವನ್ನು ಒಡ್ಡಬೇಕು. ತನ್ಮೂಲಕ ಪರಸ್ಪರರ ಅಭಿವೃದ್ಧಿಗೆ ಕಾರಣರಾಗಬೇಕು ಎಂದರು.

ಈ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಸಾಧನೆಗೈದ ಬಿ.ಕಾಂ ನ ಇಪ್ಪತ್ತು ಹಾಗೂ ಬಿ.ಬಿ.ಎಂನ ಐದು ಮಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ ಭಟ್, ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ಶೈಕ್ಷಣಿಕ ನಿರ್ದೇಶಕ ಡಾ.ವಿಘ್ನೇಶ್ವರ ವರ್ಮುಡಿ ಉಪಸ್ಥಿತರಿದ್ದರು.

ವಿಭಾಗ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಪ್ರಸ್ತಾವನೆಗೈದರು. ವಿದ್ಯಾರ್ಥಿ ಪತಂಜಲಿ ಪಾರೆ ಸ್ವಾಗತಿಸಿದರು. ವಿದ್ಯಾಥಿ ಅನಂತ ಕೃಷ್ಣ ವಂದಿಸಿದರು. ಉಪನ್ಯಾಸಕಿ ಅಮೃತಾ ಶ್ಯಾನುಭೋಗ್ ಕಾರ್ಯಕ್ರಮ ನಿರ್ವಹಿಸಿದರು.