VIVEKANANDA COLLEGE, PUTTUR

Re - accredited at 'A' Grade by the NAAC with 3.30 CGPA

Recognised as the College with Potential for Excellence (CPE) By the UGC

| +91 8251 230 455 | Kannada

ವಿವೇಕಾನಂದದಲ್ಲಿ ನೂತನ ವಾಣಿಜ್ಯ ವಿದ್ಯಾರ್ಥಿಗಳಿಗೆ ಸ್ವಾಗತ

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನೂತನ ಸಾಲಿನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು. ವಿಭಾಗದ ಪ್ರಾಧ್ಯಾಪಕ ಪ್ರೊ.ಸಂಪತ್ತಿಲ ಈಶ್ವರ ಭಟ್ ಮಾಹಿತಿ ನೀಡಿದರು. ಪ್ರಾಂಶುಪಾಲ ಡಾ.ಎಚ್.ಮಾಧವ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಗುರುವಂದನೆ ನಡೆಯಿತು. ನೂತನ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿನಿ ನಿತೀಶ ವೇಗಸ್ ಸ್ವಾಗತಿಸಿದರು. ನಿಶ್ಮಿತಾ ವಂದಿಸಿದರು. ವಿದ್ಯಾರ್ಥಿನಿ ಉಷಾ ಎ.ಎಂ ಕಾರ್ಯಕ್ರಮ ನಿರ್ವಹಿಸಿದರು.