ವಿವೇಕಾನಂದದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ
ಪುತ್ತೂರು: IISC, IIT ಮತ್ತು ಎಓಅS ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ನಡೆಸಲ್ಪಡುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಗಳಿಸಬೇಕಾದರೆ ವಿಜ್ಞಾನದ ಮೂಲಭೂತ ತತ್ವಗಳನ್ನು ಅರಿತುಕೊಳ್ಳುವುದು ಅತ್ಯಗತ್ಯ ಎಂದು IIScಅ ಬೆಂಗಳೂರಿಗೆ ಎಖಈ ಆಗಿ ಆಯ್ಕೆಯಾದ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಪವಿತ್ರ ಬಿ. ಹೇಳಿದರು.
ಅವರು ಇತ್ತೀಚೆಗೆ ವಿವೇಕಾನಂದ ಕಾಲೇಜಿನ ವಿಜ್ಞಾನ ಸಂಘವು ವಿಜ್ಞಾನ ವಿಭಾಗದ ವಿದ್ಯಾರ್ಥಿ ಗಳಿಗಾಗಿ ಆಯೋಜಿಸಿದ ವಿಜ್ಞಾನ ವಿಷಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಪ್ರವೇಶ ಪರೀಕ್ಷೆ ತಯಾರಿ ಹೇಗೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಯಾವುದೇ ವಿಷಯದಲ್ಲಿ ಉನ್ನತ ವ್ಯಾಸಂಗ ಮಾಡುವುದಿದ್ದರೂ ಕೂಡ ಆ ವಿಷಯದ ಯಾವುದಾದರೊಂದು ಕ್ಷೇತ್ರದಲ್ಲಿ ಸಮಗ್ರವಾದ ಮಾಹಿತಿಯನ್ನು ಪಡೆದಿರುವುದು ಅತ್ಯಗತ್ಯವೆಂದು ಪವಿತ್ರ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್ ಮಾಧವ ಭಟ್ ಅದ್ಯಕ್ಷತೆ ವಹಿಸಿದರು. ಉಪನ್ಯಾಸದ ನಂತರ ಸಂವಾದ ಕಾರ್ಯಕ್ರಮ ನಡೆಯಿತು.
ವಿಜ್ಞಾನ ಸಂಘದ ಸಂಚಾಲಕ ಪ್ರೊ. ಎನ್ ನರಸಿಂಹ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಟಿ ಸುಧಾಕರನ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ವಿದ್ಯಾರ್ಥಿನಿ ಮಿಲನ ವಂದಿಸಿದರು