ವಿವೇಕಾನಂದದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ವಿಭಾಗದ ಚಟುವಟಿಕೆಗಳ ಬಗೆಗಿನ ಮಾಹಿತಿ ಕಾರ್ಯಕ್ರಮ ಮಂಗಳವಾರ ಕಾಲೇಜಿನಲ್ಲಿ ನಡೆಯಿತು.
ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿನಿ ಅಕ್ಷತಾ ಆಚಾರ್ಯ ಹಾಗೂ ವಿಭಾಗದ ಹಿರಿಯ ವಿದ್ಯಾರ್ಥಿ ಪ್ರಸಾದ್ ಆಚಾರ್ಯ .ಕೆ. ಅಭಿಪ್ರಾಯ ಹಂಚಿಕೊಂಡರಲ್ಲದೆ ನೂತನ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು ತಮ್ಮ ಪರಿಚಯವನ್ನು ಮಾಡಿಕೊಂಡರು.
ಪತ್ರಿಕೋದ್ಯಮ ವಿದ್ಯಾರ್ಥಿಗಳು ಮಿನುಗು ಕ್ರಿಯೇಶನ್ಸ್ ಅಡಿಯಲ್ಲಿ ರೂಪಿಸಿದ ಸ್ನೇಹ ಸ್ಪರ್ಶಿ ಕಿರುಚಿತ್ರ ಪ್ರದರ್ಶಿಸಲಾಯಿತು. ಅಲ್ಲದೆ ವಿದ್ಯಾರ್ಥಿಗಳು ತಯಾರಿಸುತ್ತಿರುವ ಆತುರ ಕಿರು ಚಿತ್ರದ ಟ್ರೈಲರ್ ಅನ್ನು ಪ್ರದರ್ಶಿಸಲಾಯಿತು.
ಪತ್ರಿಕೋದ್ಯಮ ಉಪನ್ಯಾಸಕಿ ಭವ್ಯ ಸ್ವಾಗತಿಸಿದರು. ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ವಂದಿಸಿದರು. ಮಣಿಕರ್ಣಿಕ ಮಾತುಗಾರರ ವೇದಿಕೆಯ ಕಾರ್ಯದರ್ಶಿ ಪ್ರೆಸಿಲ್ಲಾ ಒಲಿವಿಯಾ ಡಾಯಸ್ ಕಾರ್ಯಕ್ರಮ ನಿರೂಪಿಸಿದರು.