VIVEKANANDA COLLEGE of Arts, Science and Commerce (Autonomous) Puttur

Re - accredited at 'A' Grade by the NAAC with 3.30 CGPA

Recognised as the College with Potential for Excellence (CPE) by the UGC

| +91 8251 230 455 | Kannada

ಭವಿಷ್ಯದ ಬದುಕನ್ನು ಸದೃಢಗೊಳಿಸಿ : ಸೂರ್ಯನಾರಾಯಣ

ಪುತ್ತೂರು: ವಿದ್ಯಾರ್ಥಿಗಳು ಧನಾತ್ಮಕವಾದ ಚಿಂತನೆಯನ್ನು ಮಾಡಬೇಕು. ಇದರಿಂದ ತಮ್ಮ ಮುಂದಿನ ಜೀವನಕ್ಕೆ ಭದ್ರಬುನಾದಿಯನ್ನು ಹಾಕಿಕೊಂಡಂತಾಗುತ್ತದೆ. ಇದು ಭವಿಷ್ಯದ ಬದುಕನ್ನು ಸದೃಢಗೊಳಿಸಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಪೋಷಕರೊಂದಿಗೆ, ಪ್ರಾಧ್ಯಾಪಕರೊಂದಿಗೆ ಉತ್ತಮ ರೀತಿಯಲ್ಲಿ ವರ್ತಿಸಬೇಕು ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪುತ್ತೂರಿನ ನ್ಯಾಯವಾದಿ ಸೂರ್ಯನಾರಾಯಣ ಹೇಳಿದರು.

News Photo - Sooryanarayana

ಅವರು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ನಾಯಕರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಚಾರಿತ್ರ್ಯ ವಿಕಸನ ಎಂಬ ವಿಷಯದ ಕುರಿತಾಗಿ ಮಾತನಾಡಿದರು.

ಪಠ್ಯದಿಂದ ಲಭಿಸುವ ಜ್ಞಾನ ಅಂಕಗಳಿಸಲು ಸಹಕಾರಿಯಾಗುತ್ತದೆಯೇ ಹೊರತು ಬದುಕಿನಲ್ಲಿ ಉತ್ತಮ ಅಂಕಗಳಿಸಲು ಸಹಕರಿಸುವುದಿಲ್ಲ. ನಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯಲು ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಜೀವನದಲ್ಲಿ ಯಾವುದೇ ಸಾಧನೆಯನ್ನು ಮಾಡದೇ ಮಡಿದರೆ ಬದುಕಿದ್ದೇ ನಿರರ್ಥಕವಾಗುತ್ತದೆ. ಆ ನಿಟ್ಟಿನಲ್ಲಿ ಅಮೋಘ ಸಾಧನೆಯನ್ನು ಮಾಡಬೇಕು ಎಂದು ಕಿವಿ ಮಾತು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ವಿಘ್ನೇಶ್ವರ ವರ್ಮುಡಿ, ವಿಜಯ ಸರಸ್ವತಿ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲಕರಾದ  ಕ್ಯಾಪ್ಟನ್ ಡಿ. ಮಹೇಶ್ ರೈ ಉಪಸ್ಥಿತರಿದ್ದು, ಪ್ರೊ| ಕೃಷ್ಣ ಕಾರಂತ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.