ವಿವೇಕಾನಂದದಲ್ಲಿ ಮಾನ್ಸೂನ್ ಚೆಸ್ ಪಂದ್ಯಾಟ ಉದ್ಘಾಟನೆ
ಪುತ್ತೂರು: ವರ್ಷದಿಂದ ವರ್ಷಕ್ಕೆ ಚೆಸ್ ಪಂದ್ಯಾಟಗಳಲ್ಲಿ ಭಾಗವಹಿಸುವ ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚೆಸ್ ಅನ್ನುವುದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಸಂಕೇತವೂ ಹೌದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ದಯಾಕರ್ ಬಿ ಹೇಳಿದರು.
ಅವರು ವಿವೇಕಾನಂದ ಕಾಲೇಜಿನಲ್ಲಿ ಆಯೋಜನೆಗೊಂಡ ೩೭ನೇ ಅಂತರ್ ಕಾಲೇಜು ಮಾನ್ಸೂನ್ ಚೆಸ್ ಪಂದ್ಯ್ಯಾಟವನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ ಮಾನ್ಸೂನ್ ಚೆಸ್ ಪಂದ್ಯಾಟಕ್ಕೆ ಹೆಚ್ಚಿನ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿದ್ದಾರೆ. ಆದ್ದರಿಂದಲೇ ವಿದ್ಯಾರ್ಥಿಗಳ ಭಾಗವಹಿಸುವಿಕೆ ಹೆಚ್ಚಾಗತ್ತಿದೆ. ಕಠಿಣ ಪರಿಶ್ರಮದಿಂದ ಮಾತ್ರ ಸ್ಪರ್ಧೆ ಹಾಗೂ ಓದಿನಲ್ಲಿ ಗೆಲುವನ್ನು ಪಡೆಯಬಹುದು ಎಂದು ನುಡಿದರು.
ವೇದಿಕೆಯಲ್ಲಿ ಪಂದ್ಯಾಟದ ಮುಖ್ಯ ತೀರ್ಪುಗಾರ ಮಂಗಳೂರಿನ ಪ್ರಸನ್ನ ರಾವ್ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕ ಯತೀಶ್ ಕುಮಾರ್ ಬಿ ಸ್ವಾಗತಿಸಿದರು. ನಿರ್ದೇಶಕಿ ಡಾ. ಜ್ಯೋತಿ ವಂದಿಸಿದರು. ನಿರ್ದೇಶಕ ರವಿಶಂಕರ್ ವಿ ಎಸ್ ನಿರ್ವಹಿಸಿದರು.