VIVEKANANDA COLLEGE, PUTTUR

Re - accredited at 'A' Grade by the NAAC with 3.30 CGPA

Recognised as the College with Potential for Excellence (CPE) By the UGC

| +91 8251 230 455 | Kannada

ನಮ್ಮ ದೇಶದ ರಕ್ಷಣೆ ನಾವೇ ಮಾಡಬೇಕು: ಕುಸುಮಾಧರ್

ಪುತ್ತೂರು, ಅ.30: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಆಶ್ರಯದಲ್ಲಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಗಳ ಸಹಯೋಗದಲ್ಲಿ ‘ಕನ್ನಡ ರಾಜ್ಯೋತ್ಸವ’ ಪ್ರಯುಕ್ತ ಆಯೋಜಿಸಲಾದ ಕನ್ನಡ ಚಲನಚಿತ್ರೋತ್ಸವದ ಅಂಗವಾಗಿ ‘ಪುಟ್ಟಕ್ಕನ ಹೈವೇ’ ಚಲನಚಿತ್ರ ಪ್ರದರ್ಶನವು ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಾಗಿದ್ದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಸುಮಾಧರ್ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ಭಾರತ. ಭಾರತಮಾತೆಯ ಪಾದದ ಅಡಿಯಲ್ಲಿ ನಾವೆಲ್ಲ ಕೆಲಸವನ್ನು ಮಾಡುತ್ತಿದ್ದೇವೆ. ನಮ್ಮ ದೇಶದ ಸಂಸ್ಕೃತಿಯ ರಕ್ಷಣೆಯನ್ನು ನಾವು ಮಾಡಬೇಕು. ಕನ್ನಡ ರಾಜ್ಯೋತ್ಸವವನ್ನು ಹೆಮ್ಮೆಯಿಂದ ಆಚರಿಸಬೇಕು ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಸಾಮಾಜಿಕ ಸಂದೇಶಗಳನ್ನೊಳಗೊAಡ ಸಿನಿಮಾಗಳು ಈಗಿನ ವಿದ್ಯಾರ್ಥಿಗಳ ಬೆಳವಣಿಗೆಗೆ ಅಗತ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಪ್ರಜ್ಞಾ ಬಾರ್ಯ, ಭವಿಷ್ಯ ಶೆಟ್ಟಿ, ಅಕ್ಷತ್ ಭಟ್ ಉಪಸ್ಥಿತರಿದ್ದರು. ತೃತೀಯ ಪತ್ರಿಕೋದ್ಯಮದ ವಿದ್ಯಾರ್ಥಿಗಳಾದ ಶಮಿತಾ ಮುತ್ಲಾಜೆ , ಕೃತಿಕಾ ಸದಾಶಿವ ಪ್ರಾರ್ಥಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ. ಆರ್. ಕಾರ್ಯಕ್ರಮವನ್ನು ಸ್ವಾಗತಿಸಿ, ಪ್ರಸ್ತಾವನೆಗೈದರು. ವಿಭಾಗದ ಉಪನ್ಯಾಸಕಿ ಸೀಮಾ ಪೋನಡ್ಕ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.