ವಿವೇಕಾನಂದದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ
ಪುತ್ತೂರು: ಪ್ರಪಂಚದಲ್ಲೇ ಅತಿ ದೊಡ್ಡದಾದ ಪ್ರಜಾಪ್ರಭುತ್ವವನ್ನು ಹೊಂದಿದ ಭಾರತದ ಹಿರಿಮೆ ಗರಿಮೆಯನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ಯುವ ಜನಾಂಗದ ಮೇಲಿದೆ. ದೇಶದ ಅಭಿವೃದ್ಧಿಯ ಪಣ ತೊಟ್ಟು ನಾವೆಲ್ಲರೂ ಮುನ್ನಡೆದಾಗ ದೇಶ ಸದೃಢಗೊಳ್ಳುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಪ್ರೊ.ಎ.ವಿ.ನಾರಾಯಣ ಹೇಳಿದರು.
ಅವರು ಭಾನುವಾರ ಇಲ್ಲಿನ ವಿವೇಕಾನಂದ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ದ್ವಜಾರೋಹಣಗೈದು ಮಾತನಾಡಿದರು.
ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜೀವನ್ ದಾಸ್ ಹಾಗೂ ಅಧ್ಯಾಪಕ, ಅಧ್ಯಾಪಕೇತರ ವೃಂದ ಅಲ್ಲದೆ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಕಾಲೇಜಿನ ಎನ್‌ಸಿಸಿ ಘಟಕದ ವತಿಯಿಂದ ಆಕರ್ಷಕ ಪಥ ಸಂಚಲನ ನಡೆಯಿತು. ರೋವರ್‍ಸ್ ಅಂಡ್ ರೇಂಜರ್‍ಸ್ ಬಳಗದಿಂದ ಬ್ಯಾಂಡ್ ಪಾರ್ಟಿ ಆಯೋಜಿಸಲಾಗಿತ್ತು. ಎನ್.ಎಸ್.ಎಸ್ ಸ್ವಯಂ ಸೇವಕರು ಈ ಸಂದರ್ಭದಲ್ಲಿ ಹಾಜರಿದ್ದು ಸಹಕರಿಸಿದರು.