ಸಮಾಜದ ನಿರೀಕ್ಷೆಯನ್ನು ಸಕಾರಗೊಸೋಣ: ಡಾ ಪೀಟರ್ ವಿಲ್ಸನ್ ಪ್ರಭಾಕರ್
ಪುತ್ತೂರು: ಹೆತ್ತವರ ಮತ್ತು ಸಮಾಜದ ನಿರೀಕ್ಷೆಯನ್ನು ಗೌರಯುತವಾಗಿ ಈಡೇರಿಸುವ ಬಹುದೊಡ್ಡ ಜವಬ್ದಾರಿ ಇಂದಿನ ವಿದ್ಯಾರ್ಥಿಗಳ ಮೇಲಿದೆ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗೆ ತಮ್ಮ ಜ್ಞಾನವನ್ನು ಕೇಂದ್ರಿಕರಿಸುವುದರೊಂದಿಗೆ ಬಾಹ್ಯ ವಿಷಯಗಳ ಕುರಿತು ಅರಿಯುವ ಪ್ರಯತ್ನ ಮಾಡಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ಅವರು ಕಾಲೇಜಿನ ಸ್ನಾತಕೋತ್ತರ ವಿಭಾಗಗಳು ಏರ್ಪಡಿಸಿದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್‍ಯಕ್ರಮದ ಅದ್ಯಕ್ಷತೆಯನ್ನು ವಹಿಸಿ ಮಂಗಳವಾರ ಮಾತನಾಡಿದರು.
ಇಂದು ಸ್ನಾತಕೋತ್ತರ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಹಿಂದಿನ ವರ್ಷಗಳಿಗಿಂತ ಏರಿಕೆಯಾಗಿದೆ. ಆದರೆ ದೇಶದ ಜನಸಂಖ್ಯೆಗೆ ಹೋಲಿಸಿದgನಿದು ಸಾಕಷ್ಟು ಕಡಿಮೆ ಇದೆ. ಈ ನಿಟ್ಟಿನಲ್ಲಿ ಉನ್ನತ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಧನ್ಯರು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಇವತ್ತು ಗುಣ ಮಟ್ಟವುಳ್ಳ ಶಿಕ್ಷಣ ವಿದ್ಯಾರ್ಥಿಗೆ ದೊರಕುತ್ತಿದೆ. ನುರಿತ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಬದ್ಧವಾಗಿದೆ ಎಂದು ನುಡಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ವ್ಯವಹಾರ ನಿರ್ವಹಣೆ ವಿಭಾಗದ ಮುಖ್ಯಸ್ಥ ಪ್ರೊ. ಆನಂದ್, ವಿದ್ಯಾರ್ಥಿಗಳು ಹಲವು ಉದ್ದೇಶಗಳನ್ನು ಇಟ್ಟುಕೊಂಡು ಉನ್ನತ ವ್ಯಾಸಾಂಗಕ್ಕೆ ಆಗಮಿಸುತ್ತಾರೆ. ಮುಂದಿನ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ತಮ್ಮ ಪ್ರಯತ್ನವನ್ನು ಮುಂದುವರಿಸಬೇಕು. ಈ ಮೂಲಕ ತಮ್ಮ ಮೇಲೆ ಹೆತ್ತ ತಂದೆ-ತಾಯಿಗಳು ಇಟ್ಟಿರುವ ಭರವಸೆಯನ್ನು ಈಡೇರಿಸಬೇಕು ಎಂದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟರಮಣ ಭಟ್, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಕಾರಂತ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸ್ನಾತಕೋತ್ತರ ಎಂ. ಕಾಂ ವಿಭಾಗದ ಸಂಯೋಜಕಿ ವಿಜಯ ಸರಸ್ವತಿ ಸ್ವಾಗತಿಸಿ, ಪ್ರಸ್ತಾವನೆಗೈದರು. ವಿದ್ಯಾರ್ಥಿ ವಿ.ಆರ್. ಕಾರಂತ್ ಕಾರ್‍ಯಕ್ರಮ ನಿರೂಪಿಸಿದರು. ರಸಾಯನ ಶಾಸ್ತ್ರ ವಿಭಾಗದ ಸಂಯೋಜಕಿ ಸವಿತ ವಂದಿಸಿದರು.