ವಿವೇಕಾನಂದದಲ್ಲಿ ಕಾರ್ಯಾಗಾರ
ಪುತ್ತೂರು: ಶೈಕ್ಷಣಿಕ ಸಾಧನೆಯೊಂದಿಗೆ ಕೌಶಲ್ಯದ ಅಗತ್ಯ ತುಂಬಾ ಅಗತ್ಯ. ಆ ನಿಟ್ಟಿನಲ್ಲಿ ಕಾರ್ಯಗಾರಗಳು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಇವುಗಳ ಪ್ರಾಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀನಿವಾಸ ಪೈ ಹೇಳಿದರು.
ಅವರು ಕಾಲೇಜಿನ ಎಂ.ಕಾಂ ಮತ್ತು ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ವಿಭಾಗಗಳ ಆಶ್ರಯದಲ್ಲಿ ಐ ಬ್ರೇನ್ ಸಂಸ್ಥೆಯವರು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂವಹನ ಕಲೆ, ವೃತ್ತಿಪರ ಕೌಶಲ್ಯ, ಸಂದರ್ಶನ ಕಲೆ, ಪರಿಚಯ ಪತ್ರ ರಚನೆಯ ಕುರಿತಾದ ತರಬೇತಿಯನ್ನು ನೀಡಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ವೆಂಕಟ್ರಮಣ ಭಟ್ ಸ್ವಾಗತಿಸಿ, ಎಂ.ಕಾಂ ವಿಭಾಗ ಮುಖ್ಯಸ್ಥೆ ವಿಜಯ ಸರಸ್ವತಿ ವಂದಿಸಿದರು. ವಿದ್ಯಾರ್ಥಿನಿ ವಿಜಯಶ್ರೀ ಪ್ರಾರ್ಥಿಸಿ, ಉಪನ್ಯಾಸಕಿ ಸೌಜನ್ಯ ಕಾರ್ಯಕ್ರಮ ನಿರ್ವಹಿಸಿದರು.