ವಿವೇಕಾನಂದ ಕಾಲೇಜು ವಿದ್ಯಾರ್ಥಿ ಸಂಘಕ್ಕೆ ಆಯ್ಕೆ
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ೨೦೧೫-೧೬ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಶನಿವಾರ ಕಾಲೇಜಿನಲ್ಲಿ ನಡೆಯಿತು. ಅಧ್ಯಕ್ಷರಾಗಿ ಅಂತಿಮ ಬಿ.ಕಾಂ ಸಿ ವಿಭಾಗದ ರಂಜಿತ್ ಎಸ್ ಶೆಟ್ಟಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಅಂತಿಮ ಬಿ.ಎ ವಿಭಾಗದ ಪವನ್ ಕುಮಾರ್ ಎನ್ ಹಾಗೂ ಜತೆಕಾರ್ಯದರ್ಶಿಯಾಗಿ ಅಂತಿಮ ಬಿ.ಕಾಂ ಡಿ ವಿಭಾಗದ ಪೂಜಾ ಎಂ.ಎನ್ ಅಳಿಕೆ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ವಿದ್ಯಾರ್ಥಿ ಸಂಘದ ಚುನಾವಣೆ ವಿದ್ಯಾರ್ಥಿ ಸಮುದಾಯದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮವನ್ನು ಬೀರುವಂತಿರಬಾರದು. ಕೇವಲ ಧನಾತ್ಮಕ ಸಂಗತಿಗಳನ್ನಷ್ಟೇ ವಿದ್ಯಾರ್ಥಿಗಳು ಮುಂದುವರೆಸಿಕೊಂಡು ಹೋಗಬೇಕು. ಮನಸಿನ ಸಕಲ ತುಮುಲಗಳನ್ನು ಚುನಾವಣೆ ಮುಗಿದೊಡನೆ ಮರೆತುಬಿಡಬೇಕು ಎಂದರಲ್ಲದೆ ವಿದ್ಯಾರ್ಥಿ ನಾಯಕರಾಗುವುದೆಂದರೆ ಹುದ್ದೆಯನ್ನು ಅಲಂಕರಿಸುವುದಲ್ಲ, ಬದಲಾಗಿ ಜವಾಬ್ದಾರಿಯನ್ನು ಸ್ವೀಕರಿಸುವುದು ಎಂದು ನಉಡಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಪ್ರೊ.ಕೃಷ್ಣ ಕಾರಂತ, ಕ್ಯಾ.ಡಿ.ಮಹೇಶ್ ರೈ, ಡಾ.ದುರ್ಗಾರತ್ನ, ರೇಖಾ, ಹರಿಣಿ ಪುತ್ತೂರಾಯ ಚುನಾವಣಾ ಪ್ರಕ್ರಿಯೆಯನ್ನು ನಿರ್ವಹಿಸಿದರೆ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಚುನಾವಣೆ ಸುಲಲಿತವಾಗಿ ನಡೆಯುವಲ್ಲಿ ಸಹಕರಿಸಿದರು.