ಉದ್ಯೋಗ ಕ್ಷೇತ್ರಕ್ಕೆ ಆಕರ್ಷಕ ವ್ಯಕ್ತಿತ್ವ ಅಗತ್ಯ: ರಾಜೇಶ್ ಪ್ರಭು
ಪುತ್ತೂರು: ವಿದೇಶಗಳಲ್ಲೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು, ಭಾರತೀಯ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದಾಗಿದೆ. ಆದರೆ ಅದಕ್ಕೆ ತಕ್ಕುದಾದ ಸಿದ್ಧತೆಗಳನ್ನು ವಿದ್ಯಾರ್ಥಿ ಜೀವನದಲ್ಲೇ ಮಾಡಿಕೊಳ್ಲಬೇಕು ಎಂದು ಬ್ಯಾಂಕ್ ಆಫ್ ಅಮೇರಿಕಾ ಮೆರಿನ್ ಲಿಂಚ್ ನ ಸಿಂಗಾಪುರ ಶಾಖೆಯಲ್ಲಿ ಉನ್ನತ ಅಧಿಕಾರಿಯಾಗಿರುವ ಇಲ್ಲಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ರಾಜೇಶ್ ಪ್ರಭು ಹೇಳಿದರು.
ಅವರು ವಿವೇಕಾನಂದ ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.
ಪ್ರಸ್ತುತ ಸಂದರ್ಭದಲ್ಲಿ ಸಂವಹನ ಕಲೆ, ಕಂಪ್ಯೂಟರ್ ಜ್ಞಾನ, ಇಂಟರ್ನೆಟ್ ಬಳಕೆ, ಸಾಮಾನ್ಯಜ್ಞಾನ ಮೊದಲಾದ ಸಂಗತಿಗಳು ಅತಿಮುಖ್ಯವೆನಿಸಿವೆ. ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕಾದ ಅಗತ್ಯತೆಗಳಿವೆನೀ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪತ್ರಿಕೆ, ನಿಯತಕಾಲಿಕೆಗಳನ್ನು ನಿರಂತರವಾಗಿ ಓದಿಕೊಳ್ಳಬೇಕು. ಸಮಕಾಲೀನ ಸಂಗತಿಗಳನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ವಿಜಯ ಸರಸ್ವತಿ ಉಪಸ್ಥಿತರಿದ್ದರು. ಉಪನ್ಯಾಸಕಿ ರೇಖಾ ಸ್ವಾಗತಿಸಿದರು. ಉಪನ್ಯಾಸಕಿ ರವಿಕಲಾ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.