News & Updates

ಉದ್ಯೋಗ ಪಡೆಯಲು ಕೌಶಲ್ಯಾಭಿವೃದ್ಧಿ ಕಾರ್ಯಗಾರ ಅಗತ್ಯ

ಪುತ್ತೂರು ಸೆ. 23: ವಿದ್ಯಾರ್ಥಿಗಳಲ್ಲಿ ಪಠ್ಯಪುಸ್ತಕದ ಹೊರತಾಗಿ, ಉದ್ಯೋಗಕ್ಕೆ ಸಂಬAಧಪಟ್ಟ ವಿಶೇಷ ಕೌಶಲ್ಯಗಳನ್ನು ಬೆಳೆಸಬೇಕು. ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಠಿಣ ಶ್ರಮದ ಅಗತ್ಯವಿದೆ. ಕೌಶಲ್ಯ ಅಭಿವೃದ್ಧಿ ಕಾರ್ಯಗಾರಗಳು ಉದ್ಯೋಗವನ್ನು ಪಡೆಯಲು ಸಹಕಾರಿಯಾಗಿದೆ ಎಂದು ಆಕಾಂಕ್ಷಾ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀಶ ಭಟ್ ಉದ್ಯೋಗ ಕೌಶಲ್ಯ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಅವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ(ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ಆಂಡ್ ಟ್ರೈನಿಂಗ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಲಾದ 23ರಿಂದ 29ರವರೆಗೆ ನಡೆಯುವ ಕೌಶಲ್ಯವರ್ಧನೆ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಕೌಶಲ್ಯ ವರ್ಧನೆಯ ಕಾರ್ಯಗಾರಗಳು ವಿದ್ಯಾರ್ಥಿಗಳ ಕೌಶಲ್ಯವನ್ನು ವರ್ಧನೆ ಮಾಡುವಲ್ಲಿ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಭಾಗವಹಿಸಿ, ಅನುಭವವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ. ಎನ್ ಮಾತನಾಡಿ, ನಾವೆಲ್ಲರೂ ಹನುಮಂತನ ಕುಲದವರು. ಹಾಗಾಗಿ ಸಹಜವಾಗಿಯೇ ನಮ್ಮೊಳಗೆ ಕೌಶಲ್ಯ ಅಡಗಿಕೊಂಡಿದೆ. ಆದರೆ ಅದನ್ನು ಗುರುತಿಸುವಂತ ಕೆಲಸವಾದಾಗ ಮಾತ್ರ ಕೌಶಲ್ಯ ಪ್ರಪಂಚದಲ್ಲಿ ಅಭಿವ್ಯಕ್ತಗೊಳ್ಳುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ಲೇಸ್ಮೆಂಟ್ ಆಂಡ್ ಟ್ರೈನಿಂಗ್ ಸೆಲ್ ನ ಸಂಚಾಲಕಿ ರೇಖಾ ಸ್ವಾಗತಿಸಿ, ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ್ಯೆ ಡಾ. ವಿದ್ಯಾ ಕೆ. ಎನ್ ನಿರೂಪಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ ಉದ್ಘಾಟನಾ  ಕಾರ್ಯಕ್ರಮ-14-10-2024

ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ…

ಪುತ್ತೂರು,ಅ.14: ಪ್ರಸ್ತುತ ದಿನಗಳಲ್ಲಿ ಮನಃಶಾಸ್ತ್ರ ವಿಭಾಗ ಹೆಚ್ಚು…

ನಮ್ಮತನವನ್ನು ಮರಳಿ ತರುವ ಪ್ರಯತ್ನವಾಗಲಿ; ಡಾ.ಪ್ರಭಾಕರ ಭಟ್ ಕಲ್ಲಡ್ಕ.

ನಮ್ಮತನವನ್ನು ಮರಳಿ ತರುವ ಪ್ರಯತ್ನವಾಗಲಿ; ಡಾ.ಪ್ರಭಾಕರ…

ಪುತ್ತೂರು, ಅ.೦೯: ನವರಾತ್ರಿಯ ಶುಭ ಸಂರ‍್ಭದಲ್ಲಿ ವಿವೇಕಾನಂದ…

ಸಾಂಸ್ಕೃತಿಕ ವಾತಾವರಣ ಇದ್ದಲ್ಲಿ ಜೀವನೋತ್ಸಾಹ ಇರುತ್ತದೆ: ಡಾ.ಜೀವನ್ ರಾಮ್ ಸುಳ್ಯ

ಸಾಂಸ್ಕೃತಿಕ ವಾತಾವರಣ ಇದ್ದಲ್ಲಿ ಜೀವನೋತ್ಸಾಹ ಇರುತ್ತದೆ:…

ವಿವೇಕಾನಂದ ಕಾಲೇಜಿನಲ್ಲಿ ಪ್ರತಿಭೋತ್ಸವಪುತ್ತೂರು, ಸೆ. 27: ತರಗತಿಯ…