News & Updates

ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ.

ಪುತ್ತೂರು; ಮೇ.10; ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ
ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್
ಅವರು ಆಂದ್ರಪ್ರದೇಶದ ಕುಪ್ಪಂ ನ ದ್ರಾವಿಡಿಯನ್
ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ “Synthesis and Characterizations of some
bioactive molecules: Triazolopyrimidine, Quinoline,Benzisoxalzole and
Benzimidazole Derivatives “ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ
ದೊರೆತಿದೆ.
ಇವರು ಉಜಿರೆಯ ಎಸ್ ಡಿಎಂ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ
ಮುಖ್ಯಸ್ಥ ಮತ್ತು ಸ್ನಾತಕೋತ್ತರ ವಿಭಾಗದ ಡೀನ್ ಡಾ.ಪಿ.ವಿಶ್ವನಾಥ್
ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು
ಮAಡಿಸಿರುತ್ತಾರೆ.
ಪ್ರೊ.ಕೃಷ್ಣ ಕಾರಂತ್ ಇವರು ಸುಮಾರು 34 ವರ್ಷಗಳಿಂದ
ರಸಾಯನಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ನೂರಾರು
ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡಿದ್ದಾರೆ. ಪುತ್ತೂರು
ತಾಲೂಕಿನ ಕಾಂಚನ ನಿವಾಸಿ ದಿ.ವಿಷ್ಣು ಕಾರಂತ ಹಾಗೂ ದಿ.ಗೌರಿ ಕಾರಂತ
ಇವರ ಪುತ್ರರಾಗಿದ್ದು ಪ್ರಸ್ತುತ ಪುತ್ತೂರಿನ ಕಾರ್ಜಲ್
ಬಯಂಬೆಯಲ್ಲಿ ವಾಸ್ತವ್ಯವಾಗಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿಕಾರ್ಯಾಗಾರ ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ…

ಪುತ್ತೂರು,ಜು.15: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು.ನಾವು…

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಪುತ್ತೂರು.ಜು,15: ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆದೊರಕಬೇಕೆಂದರೆ ಅಲ್ಲಿ…

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ತ್ತೂರು:ಜು.13; ವಿಶೇಷ ಮೌಲ್ಯಗಳುಳ್ಳಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳುಹಾಗೂ…