News & Updates

ವೃತ್ತಿ ಜೀವನವು ವಿದ್ಯಾರ್ಥಿ ಜೀವನಕ್ಕಿಂತ ಭಿನ್ನ

ವೃತ್ತಿ ಜೀವನವು ವಿದ್ಯಾರ್ಥಿ ಜೀವನಕ್ಕಿಂತ ಭಿನ್ನ. ವೃತ್ತಿ ಜೀವನದಲ್ಲಿ ನಮ್ಮನ್ನು ನಾವು ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನವಾದರೆ ಮಾತ್ರ ನಾವು ಕಾರ್ಪೊರೇಟ್ ಹಂತದಲ್ಲಿ ಗೆಲ್ಲಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ತನ್ನ ಜೀವನದಲ್ಲಿ ಕೌಶಲ್ಯ ಅಭಿವೃದ್ಧಿಗೆ ಬೇಕಾದಂತಹ ಅಂಶಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಎಎಂಡಿ ಸಂಸ್ಥೆ ,  ಟೆಕ್ಸಾಸ್ ಯು,ಎಸ್ ಎ ಕಾರ್ಯಪಡೆಯ ಯೋಜನಾ ವ್ಯವಸ್ಥಾಪಕಿ  ಸೌಮ್ಯ ಬೋನಂತಾಯ ಹೇಳಿದರು.

ಇವರು ಗುರುವಾರ ನಡೆದ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ  ಸ್ವಾಯತ್ತ ಪುತ್ತೂರು,  ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ನಡೆದ ಕ್ಯಾಂಪಸ್ ಟು ಕಾರ್ಪೊರೇಟ್ ಟಿಪ್ಸ್ ಆಂಡ್ ಟ್ರಿಕ್ಸ್  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ವಿದ್ಯಾರ್ಥಿಗಳಿಗೆ ಹಲವಾರು ವಿಷಯಗಳು ತಿಳಿದಿರುವುದಿಲ್ಲ. ಇಂಥಹ ಕಾರ್ಯಾಗಾರಗಳು ವಿದ್ಯಾರ್ಥಿಗಳ  ಜ್ಞಾನವನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತವೆ. ಹೆಚ್ಚು ಹೆಚ್ಚು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸಬೇಕು ಎಂದು ನುಡಿದರು.

ವೇದಿಕೆಯಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಅಧ್ಯಾಪಕ ರಾಘವೇಂದ್ರ ಉಪಸ್ಥಿತರಿದ್ದರು. .
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಕೇಶ್ ಪ್ರಸಾದ್ ಕೆ ಸ್ವಾಗತಿಸಿ, ಜಿನ್ನಪ್ರಕಾಶ್ ವಂದಿಸಿ,  ಪುಣ್ಯಶ್ರೀ ನಿರೂಪಿಸಿದರು

Related News

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿಕಾರ್ಯಾಗಾರ ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ…

ಪುತ್ತೂರು,ಜು.15: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು.ನಾವು…

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಪುತ್ತೂರು.ಜು,15: ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆದೊರಕಬೇಕೆಂದರೆ ಅಲ್ಲಿ…

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ತ್ತೂರು:ಜು.13; ವಿಶೇಷ ಮೌಲ್ಯಗಳುಳ್ಳಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳುಹಾಗೂ…