News & Updates

ಸಂಶೋಧನೆ ಎಂಬುದು ಬಾಲ್ಯದಿಂದಲೇ ಪ್ರಾರಂಭವಾಗುವಂತದ್ದು : ಶಂಕರ ಜೋಯಿಸ

ಪುತ್ತೂರು,ಮೇ.14:
ವಿಜ್ಞಾನ ಎನ್ನುವುದು ಸಂಶೋಧನೆ,ಪ್ರಯೋಗ ಮತ್ತು ಮಾದರಿಗಳನ್ನು ತಯಾರಿಸುವ ಪ್ರಕಾರ. ವಿದ್ಯಾರ್ಥಿಗಳು ಪುಸ್ತಕದಲ್ಲಿ ಇದ್ದದ್ದಷ್ಟೇ ಓದಿದರೆ ಸಾಲದು, ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು, ಹೊಸ ಹೊಸ ವಿಚಾರಗಳನ್ನು ಕಲಿಯುವ ಕುತೂಹಲ ಇದ್ದಾಗ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತೊಡಗುತ್ತಾರೆ. ಆದ್ದರಿಂದ ನಾವು ನಮ್ಮನ್ನೇ ಪ್ರೋತ್ಸಾಹಿಸಿಕೊಂಡು ಮುಂದುವರಿಯುವುದು ಬಹು ಮುಖ್ಯ ಎಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಶಂಕರ ಜೋಯಿಸ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸೈನ್ಸ್ ಅಸೋಸಿಯೇಷನ್ ಮತ್ತು ಐ ಕ್ಯೂ ಎ ಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ ಕೌಶಲ್ಯ ಆಧಾರಿತ ವಿಬ್ಜೋರ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಲೇಜಿನ ವಿಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿನಿ ಶಿವಾನಿ ಮಲ್ಯ ಮಾತನಾಡಿ, ವಿದ್ಯಾರ್ಥಿಗಳು ಮುಖ್ಯವಾಗಿ ಓದುವ ಹವ್ಯಾಸವನ್ನು ಇಟ್ಟುಕೊಳ್ಳಬೇಕು, ಹೊಸ ಹೊಸ ವಿಚಾರಗಳನ್ನು ಕಲಿಯುದರತ್ತ ಗಮನ ಹರಿಸಬೇಕು. ಇದು ನಮ್ಮ ಜ್ಞಾನಾಭಿವೃದ್ಧಿಗೆ ಸಹಕಾರಿ. ನಮ್ಮಲ್ಲಿರುವ ಜ್ಞಾನಶಕ್ತಿ, ಕ್ರಿಯಾಶೀಲತೆ ಮತ್ತು ಸೃಜನಶೀಲತೆಯನ್ನು ಪ್ರದರ್ಶಿಸಲು ಇದು ಒಂದು ಉತ್ತಮ ವೇದಿಕೆ.ಆದ್ದರಿಂದ ವಿದ್ಯಾರ್ಥಿಗಳೆಲ್ಲರೂ ಆಸಕ್ತಿಯಿಂದ ಪಾಲ್ಗೊಳ್ಳಿ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಎಲ್ಲ ವಿದ್ಯಾರ್ಥಿಗಳಲ್ಲೂ ಒಂದೊಂದು ಸುಪ್ತ ಪ್ರತಿಭೆ ಅಡಗಿರುತ್ತದೆ, ಅದನ್ನು ನಾವು ತಿಳಿಯಲು ಇಂತಹ ಕಾರ್ಯಕ್ರಮಗಳು ಸೂಕ್ತ. ವಿದ್ಯಾರ್ಥಿಗಳು ಹೆಚ್ಚಿನ ವಿಚಾರಗಳನ್ನು ಕಲಿಯುವುದರಲ್ಲಿ ತೊಡಗಿಸಿಕೊಳ್ಳಬೇಕು.ಆದ್ದರಿಂದ ಸಕ್ರಿಯ ಭಾಗವಹಿಸುವಿಕೆ ಬಹು ಮುಖ್ಯ ಮತ್ತು,ಇದು ವಿದ್ಯಾರ್ಥಿಗಳಿಗೆ ಕಾರ್ಯಕ್ರಮವನ್ನು ಸಂಘಟಿಸುವ ಮತ್ತು ನಾಯಕತ್ವ ಗುಣವನ್ನು ಕಲಿಸಿಕೊಡುತ್ತದೆ. ಸೋಲು ಗೆಲುವು ಮತ್ತು ಬಹುಮಾನ ಮುಖ್ಯವಲ್ಲ ನಮ್ಮಲ್ಲಿರುವ ಪ್ರತಿಭೆ ಮತ್ತು ಅದಕ್ಕಿರುವ ಮೌಲ್ಯ ಮುಖ್ಯ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ. ಎಸ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ವಿಜ್ಞಾನ ವಿಭಾಗದ ಹೆಮ್ಮೆಯ ಹಿರಿಯ ವಿದ್ಯಾರ್ಥಿನಿ ಶಿವಾನಿ ಮಲ್ಯ ಅವರನ್ನು ಸನ್ಮಾನಿಸಲಾಯಿತು.
ಪೆಸ್ಟ್ ನಲ್ಲಿ ಸುಮಾರು 15ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವೇದಿಕೆಯಲ್ಲಿ ವಿಜ್ಞಾನ ಸಂಘದ ಸಂಯೋಜಕ ಮತ್ತು ಪ್ರಾಣಿ ಶಾಸ್ತ್ರದ ಮುಖ್ಯಸ್ಥ ಡಾ.ಈಶ್ವರ ಪ್ರಸಾದ್ ಕೆ. ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅಂತಿಮ ವಿಭಾಗದ ಬಿ ಎಸ್ಸಿ ವಿದ್ಯಾರ್ಥಿನಿಯರಾದ ಶ್ರೀನಾ ಟಿ. ಎಸ್ ಸ್ವಾಗತಿಸಿ, ಅನನ್ಯ ಲಕ್ಷ್ಮೀ ವಂದಿಸಿ, ಅನನ್ಯ ನಿರ್ವಹಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿಕಾರ್ಯಾಗಾರ ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ…

ಪುತ್ತೂರು,ಜು.15: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು.ನಾವು…

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಪುತ್ತೂರು.ಜು,15: ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆದೊರಕಬೇಕೆಂದರೆ ಅಲ್ಲಿ…

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ತ್ತೂರು:ಜು.13; ವಿಶೇಷ ಮೌಲ್ಯಗಳುಳ್ಳಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳುಹಾಗೂ…